ಕೋಲ್ಕತ್ತಾ: ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್, ಆರೋಗ್ಯ ಸೇವೆಗಳ ನಿರ್ದೇಶಕ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ವಜಾಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ಧರಣಿ ನಿರತ ಕಿರಿಯ ವೈದ್ಯರ ಬೇಡಿಕೆಗೆ ಮಣಿದು ಈ ಕ್ರಮಕೈಗೊಂಡಿರುವುದಾಗಿ ತಡ ರಾತ್ರಿ ಮಮತಾ ಘೋಷಿಸಿದ್ದಾರೆ. ಅಲ್ಲದೇ ವೈದ್ಯರ ಬೇಡಿಕೆಗಳಲ್ಲಿ ಸುಮಾರು 99 ಪ್ರತಿಶತವನ್ನು ಅಂಗೀಕರಿಸಲಾಗಿದೆ ಎಂದು ಅವರು ಹೇಳಿದರು.
ಇಂದು ಸಂಜೆ 4 ಗಂಟೆಯ ನಂತರ ಹೊಸ ಕೋಲ್ಕತ್ತಾ ಪೊಲೀಸ್ ಆಯುಕ್ತರ ಹೆಸರನ್ನು ಪ್ರಕಟಿಸಲಾಗುವುದು ಎಂದು ಆರ್ ಜಿ ಕರ್ ಬಿಕ್ಕಟ್ಟನ್ನು ಪರಿಹರಿಸಲು ತಮ ನಿವಾಸದಲ್ಲಿ ನಡೆದ ಸಭೆಯ ನಂತರ ಅವರು ಸುದ್ದಿಗಾರರಿಗೆ ತಿಳಿಸಿದರು.
ವೈದ್ಯರು ತಮ ಬಹುತೇಕ ಬೇಡಿಕೆಗಳನ್ನು ಸ್ವೀಕರಿಸಿರುವುದರಿಂದ ಕೆಲಸಕ್ಕೆ ಮರಳುವಂತೆ ಮುಖ್ಯಮಂತ್ರಿಗಳು ಒತ್ತಾಯಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


