nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026
    Facebook Twitter Instagram
    ಟ್ರೆಂಡಿಂಗ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    • ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಸಂಪೂರ್ಣ ಬೆಂಬಲ: ಶಾಸಕ ಅನಿಲ್ ಚಿಕ್ಕಮಾಧು
    ಜಿಲ್ಲಾ ಸುದ್ದಿ August 5, 2025

    ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಸಂಪೂರ್ಣ ಬೆಂಬಲ: ಶಾಸಕ ಅನಿಲ್ ಚಿಕ್ಕಮಾಧು

    By adminAugust 5, 2025No Comments2 Mins Read
    adi karnataka

    ಸರಗೂರು: ನೂತನ ತಾಲೂಕು ಸರಗೂರಿನಲ್ಲಿ ತಾಲೂಕು ಮಟ್ಟದ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಶಾಸಕ ಅನಿಲ್ ಚಿಕ್ಕಮಾಧು ಹೇಳಿದರು.

    ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಸೋಮವಾರ ತಾಲೂಕು ಆದಿಕರ್ನಾಟಕ ಮಹಾಸಭಾ, ಡಾ.ಬಿ.ಆರ್.ಅಂಬೇಡ್ಕರ್ ಟ್ರಸ್ಟ್ ತಾಲೂಕು ಶಾಖೆಯಿಂದ ನಡೆದ 2024–25ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    Provided by
    Provided by

    “ಕೋಟೆ ತಾಲೂಕಿನಲ್ಲಿ ನಿರ್ಮಾಣಗೊಂಡ ಮಾದರಿಯಲ್ಲಿಯೇ ಸರಗೂರಿನಲ್ಲಿಯೂ ಭವನ ನಿರ್ಮಾಣಕ್ಕೆ ಮುಂದಾಗಲಾಗುವುದು. ಈಗಾಗಲೇ ನಿವೇಶನ ಕುರಿತ ಕಡತ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದು, ಅತೀ ಶೀಘ್ರದಲ್ಲೆ ನಿವೇಶನ ಮಂಜೂರಾಗಲಿದೆ. ಜನಾಂಗದ ಬೇಡಿಕೆಯಂತೆ 10 ಕೋಟಿ ರೂ.ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರಲ್ಲಿ ಅನುದಾನಕ್ಕಾಗಿ ಮಾತುಕತೆ ನಡೆಸಲಾಗುವುದು. ಭವನ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ಇರಲಿದೆ” ಎಂದು ಅವರು ತಿಳಿಸಿದರು.

    ಸಮಾಜಕ್ಕಾಗಿ ಓದಿ: “ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ಮಕ್ಕಳು ಅತ್ಯಂತ ಬುದ್ಧಿವಂತ ಮಕ್ಕಳು. ತಮಗಾಗಿ ಓದದೇ ಸಮಾಜದ ಏಳಿಗೆಗಾಗಿ ಓದಬೇಕು. ಅಂಬೇಡ್ಕರ್ ಅವರಂಥ ಬುದ್ಧಿಜೀವಿ ಭೂಮಿ ಮೇಲೆ ಯಾರು ಇಲ್ಲ. ಹೀಗಾಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ವೃತ್ತಯೊಂದಕ್ಕೆ ಅಂಬೇಡ್ಕರ್ ಹೆಸರು ಇಡಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಇದಲ್ಲದೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕ್ರಮವಹಿಸಲಾಗುವುದು” ಎಂದರು.

    “ಕೋಟೆ, ಸರಗೂರು ಅವಳಿ ತಾಲೂಕುಗಳಂತೆ ಆದಿ ಕರ್ನಾಟಕ ಮಹಾಸಭಾದವರು ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ಮಾಡಿದರೆ ತುಂಬಾ ಖುಷಿಯಾಗಲಿದೆ. ಎಲ್ಲರೂ ಒಂದೆಡೆ ಸೇರಿದರೆ ಅರ್ಥಪೂರ್ಣ ಕಾರ್ಯಕ್ರಮವಾಗಲಿದೆ. ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಎಲ್ಲರೂ ಮುನ್ನುಗ್ಗಬೇಕು. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಬೇಕು” ಎಂದು ಸಲಹೆ ನೀಡಿದರು.

    ಆದಿ ಕರ್ನಾಟಕ ಮಹಾಸಭಾದ ಅಧ್ಯಕ್ಷ ಶಿವಣ್ಣ ಮಾತನಾಡಿ, “ ಸಮಾಜ ಶ್ರೇಯೋಭಿವೃದ್ಧಿಗಾಗಿ ದುಡಿಯುತ್ತಿರುವ ಆದಿ ಕರ್ನಾಟಕ ಮಹಾಸಭಾ, ಅಂಬೇಡ್ಕರ್ ಟ್ರಸ್ಟ್ ಒಗ್ಗೂಡಿ ಮಕ್ಕಳಿಗೆ ಉತ್ತಮವಾದ ಕಾರ್ಯಕ್ರಮವನ್ನು ಮಾಡಿಕೊಂಡು ಬರುತ್ತಿದ್ದು, ಓದಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರಿಗೆ ಪ್ರೋತ್ಸಾಹ ನೀಡುವಂಥ ಕಾರ್ಯಕ್ರಮ ಮಾಡಿಕೊಂಡು ಬರಲಾಗುತ್ತಿದೆ. ಇದಕ್ಕೆ ಜನಾಂಗದ ಸಂಪೂರ್ಣವಾಗಿ ಬೆಂಬಲ ನೀಡುತ್ತಾ ಬಂದಿರುವುದು ಸಂತಸದ ವಿಚಾರವಾಗಿದೆ ಎಂದು ಹೇಳಿದರು.

    ಅಂತರಸಂತೆ ಸಾರಾನಾಥ ಬುದ್ಧವಿಹಾರದ ಗೌತಮಿ ಭಂತೇಜಿ ಸಾನ್ನಿಧ್ಯ ವಹಿಸಿದ್ದರು. ಕೋಟೆ ಆದಿ ಕರ್ನಾಟಕ ಮಹಾಸಭಾದ ಅಧ್ಯಕ್ಷ ಹೈರಿಗೆ ಶಿವರಾಜು, ಪಟ್ಟಣ ಪಂಚಾಯಿತಿ ಸದಸ್ಯರಾದ ಚಲುವಕೃಷ್ಣ, ಚಂದ್ರಕಲಾ ರಾಜಣ್ಣ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಭಾಗ್ಯಲಕ್ಷ್ಮೀ ನಿಂಗರಾಜು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಲುವರಾಜು, ಅಂಬೇಡ್ಕರ್ ಟ್ರಸ್ಟ್ ನ ಅಧ್ಯಕ್ಷ ಚೆನ್ನಿಪುರ ಎನ್.ನಾಗರಾಜು, ಟೌನ್ ಅಧ್ಯಕ್ಷ ಸಣ್ಣಸ್ವಾಮಿ, ಗಡಿ ಯಜಮಾನ ರಂಗಯ್ಯ, ಮಹಾಸಭಾದ ಪ್ರಧಾನ ಕಾರ್ಯದರ್ಶಿ ಚೆನ್ನಿಪುರ ಮಲ್ಲೇಶ್, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಲಂಕೆ ರಮೇಶ್  ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಸಹಳ್ಳಿ ನವೀನ್, ಪುಟ್ಟಸ್ವಾಮಿ, ಶಿವಚನ್ನಪ್ಪ,ತಾಪಂ ಅಧ್ಯಕ್ಷ ಮನುಗನಹಳ್ಳಿ ಗುರುಸ್ವಾಮಿ,ಸೇರಿದಂತೆ ಸಮಾಜದ ಬಂಧುಗಳು ಹಾಜರಿದ್ದರು.

    ಇದೇ ಸಂದರ್ಭದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಆದಿ ಕರ್ನಾಟಕ ಮಹಾಸಭಾದ ಅಧ್ಯಕ್ಷ ಶಿವರಾಜು, ಗೌರವಾಧ್ಯಕ್ಷ ಹುಣಸಹಳ್ಳಿ ಬಸವರಾಜು ಅವರನ್ನು ಅಭಿನಂದಿಸಲಾಯಿತು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕಂಪನಿಯೊಂದರ ಲೆಟರ್ ಹೆಡ್, ಮೊಹರು, ಸಹಿ ನಕಲು ಮಾಡಿ ಸುಳ್ಳು ಅನುಭವ ಪ್ರಮಾಣ ಪತ್ರ ಪಡೆದ ಆರೋಪದ ಮೇರೆಗೆ…

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.