ಚಿಕ್ಕೋಡಿ: ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ ಇಂದು ಭಕ್ತರ ಕಂಬನಿಯ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ನೆರವೇರಿತು.
ಜೈನಮುನಿಗಳ ಚಿತೆಗೆ ಕಾಮಕುಮಾರನಂದಿ ಮಹಾರಾಜರ ಪೂರ್ವಾಶ್ರಮದ ಅಣ್ಣನ ಮಗ ಭೀಮಗೊಂಡ ಉಗಾರೆ ಅವರು ಅಗ್ನಿಸ್ಪರ್ಶ ಮಾಡಿದರು. ಕಾಮಕುಮಾರನಂದಿ ಮಹಾರಾಜರ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ಕೆಲ ಕ್ಷಣಗಳ ಕಾಲ ಜಿಟಿಜಿಟಿ ಮಳೆಯಾಗಿದೆ.
ಬೆಳಗ್ಗೆ 8 ಗಂಟೆಗೆ ರಕ್ಷಾ ವಿಸರ್ಜನಕ್ಕೆ ಬರುವಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಹತ್ಯೆ ಖಂಡಿಸಿ 10 ಗಂಟೆಗೆ ಚಿಕ್ಕೋಡಿಯ ಆರ್ಡಿ ಕಾಲೇಜಿನಿಂದ ಮೌನ ಪ್ರತಿಭಟನಾ ಮೆರವಣಿಕೆ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಆಗಮಿಸುವಂತೆ ಸೂಚನೆ ನೀಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy