ತುಮಕೂರು: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮನೋಜ್ (19)ಅಂತ್ಯಕ್ರಿಯೆ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನದ ನಡುವೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಡೆಯೂರು ಬಳಿಯ ನಾಗಸಂದ್ರ ಗ್ರಾಮದಲ್ಲಿ ನಡೆಯಿತು.
ಮನೋಜ್ ಅವರ ಅಂತ್ಯಕ್ರಿಯೆ ತೋಟದಲ್ಲಿ ನಡೆಯಿತು. ಅಂತ್ಯಕ್ರಿಯೆ ವೇಳೆ ಮೃತದೇಹದ ಮುಂದೆ ಕುಟುಂಬಸ್ಥರು ಕಣ್ಟಿರಿಟ್ಟರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರದ ರೆಸಿಡೆನ್ಸಿ ಕಾಲೇಜಿನಲ್ಲಿ ಬಿಬಿಎಂ ಮಾಡುತ್ತಿದ್ದ ಮನೋಜ್, ಯಲಹಂಕದಲ್ಲಿ ತಂದೆ ತಾಯಿ ಹಾಗೂ ತಂಗಿ ಜೊತೆ ವಾಸವಿದ್ದನು.
ನಿನ್ನೆ ಸ್ನೇಹಿತರ ಜೊತೆ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿದ್ದ ಮನೋಜ್, ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದನು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW