ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರ ಬಸ್ ನಿಲ್ದಾಣದಲ್ಲಿರುವ ಶೌಚಾಲಯ ಗಬ್ಬೆದ್ದು ನಾರುತ್ತಿದ್ದು, ಶೌಚಾಲಯದ ನೈರ್ಮಲ್ಯ ಕಾಪಾಡಲು ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂತಹದ್ದೊಂದು ಘಟನೆ ನಡೆದಿದ್ದು, ಪ್ರಯಾಣಿಕರು ಮೂಗುಮುಚ್ವಿಕೊಂಡು ಓಡಾಡುವಂತಹ ಪರಿಸ್ಥಿತಿ ಇದೀಗ ಬಂದಿದೆ.
ಹಿರಿಯೂರು ನಗರದಲ್ಲಿ ದಿನಕ್ಕೆ ಸಾವಿರಾರು ಮಂದಿ ಪ್ರಯಾಣ ಪ್ರಯಾಣ ಮಾಡುವಂತಹ ನಿಲ್ದಾಣವಾಗಿದ್ದು, ಹಿರಿಯೂರು ನಗರದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಶೌಚಾಲಯದ ಇದೀಗ ಸರಿಯಾದ ವ್ಯವಸ್ಥೆ ಇಲ್ಲದೆ ಗಬ್ಬೆದ್ದು ಹೋಗಿದೆ. ಸಾರ್ವಜನಿಕರು ಹಾಗೂ ಪ್ರಯಾಣಿಕರು ಸಂಬಂಧ ಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ .
ಇದೇ ಸ್ಥಳದಲ್ಲಿಕಾರ್ಯ ನಿರ್ವಹಿಸುವ ಸಾರಿಗೆ ಸಂಸ್ಥೆ ಇಲಾಖೆಯ ಅಧಿಕಾರಿಗಳು , ಬಸ್ ನಿಲ್ದಾಣದ ದುಸ್ಥಿತಿ ಕಂಡೂ ಕಂಡು ಕಾಣದಂತೆ ಕಣ್ಣುಮುಚ್ಚಿ ಕುಳಿತಿದ್ದಾರೆ. ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಕೇಳುವವರು ಯಾರು? ಎನ್ನುವ ಪ್ರಶ್ನೆಗಳಿಗೆ ಇದು ಕಾರಣವಾಗಿದೆ.
ಬಸ್ ನಿಲ್ದಾಣದ ಆವರಣದಲ್ಲಿರುವ ಮರವೊಂದು ಒಣಗಿ ಹೋಗಿದ್ದು, ಇದನ್ನು ಇನ್ನೂ ತೆರವುಗೊಳಿಸದೇ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಹಿರಿಯೂರು ನಗರದಲ್ಲಿ ಆಟೋ ಚಾಲಕರಿಗೂ ಸಹ ಸೂಕ್ತ ಆಟೋ ನಿಲ್ದಾಣ ಇಲ್ಲ ಎಂದು ಆಟೋ ಚಾಲಕರೊಬ್ಬರು ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಅಳಲು ತೋಡಿಕೊಂಡರು.
ಸ್ಥಳೀಯ ಶಾಸಕರು, ಆಡಳಿತ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಇದರ ಕಡೆ ಸ್ವಲ್ಪ ಗಮನ ಹರಿಸಬೇಕಾಗಿದೆ . ಸಾರಿಗೆ ಸಂಸ್ಥೆ ಇಲಾಖೆಯ ಅಧಿಕಾರಿಗಳು ಬಸ್ ನಿಲ್ದಾಣದ ಸ್ವಚ್ಛತೆಯ ವಿಚಾರದಲ್ಲಿ ಜವಾಬ್ದಾರಿಯಿಂದ ವರ್ತಿಸಬೇಕಿದೆ. ದಿನನಿತ್ಯ ನೂರಾರು ಜನರು ಆಗಮಿಸುವ ಬಸ್ ನಿಲ್ದಾಣವನ್ನು ಸ್ವಚ್ಛ ಮಾಡುವುದು ಸಂಬಂಧಪಟ್ಟವರ ಜವಾಬ್ದಾರಿಯಾಗಿದೆ. ಈ ಶೌಚಾಲಯ ನಿರ್ವಹಣೆ ಸರಿಯಾಗಿಲ್ಲ. ಇದರಿಂದಾಗಿ ನಾನಾ ರೋಗಗಳು ಹರಡುವ ಸಾಧ್ಯತೆಗಳಿವೆ. ಬಸ್ ನಿಲ್ದಾಣದಲ್ಲಿ ಸ್ವಚ್ಛತೆಯ ಕುರಿತು ನಾನಾ, ಅನೌನ್ಸ್ ಮೆಂಟ್ ಗಳನ್ನು ಮಾಡುವ ಸರ್ಕಾರಿ ಅಧಿಕಾರಿಗಳು ತಾವೇ ಬೇಜವಾಬ್ದಾರಿ ಪ್ರದರ್ಶಿಸಿ ಇತರರಿಗೆ ಬುದ್ಧಿ ಹೇಳಿದರೆ, ಹಾಸ್ಯಾಸ್ಪದವಲ್ಲವೇ ? ಎನ್ನುವ ಪ್ರಶ್ನೆಗಳು ಇದೀಗ ಕೇಳಿ ಬಂದಿವೆ.
ವರದಿ: ಮುರುಳಿಧರನ್ ಆರ್ ಹಿರಿಯೂರು. ( ಚಿತ್ರದುರ್ಗ)
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


