ಬೆಳಗಾವಿ: ರಮೇಶ್, ಲಖನ್ ಗಾಡಿ ಕಳಿಸಿದ ಅಂದ ತಕ್ಷಣ ಹೋಗಬೇಡಿ. ನಮ್ಮ ಪಕ್ಷದ ಮುಖಂಡರು ಈ ಸಂಸ್ಕೃತಿಯನ್ನು ಬಿಟ್ಟುಬಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದಲ್ಲಿ ಮತದಾರರಿಗೆ 10,000 ಮುಂಗಡ ಪಾವತಿ ಮಾಡಿದ್ದಾರೆ ಎಂಬ ಮಾತುಗಳಿವೆ. ಮೂರ್ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಹಾಕುವುದಿಲ್ಲವೆಂಬ ಮಾಹಿತಿ ಬಂದಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಮತದಾರರ ಚೀಟಿ ಪಡೆದು ನಾವೇ ಮತ ಹಾಕುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ನೀಡಲು ವಿಡಿಯೊ ಚಿತ್ರೀಕರಣ ನಡೆಸಲು ಚುನಾವಣಾ ಆಯೋಗ, ಚುನಾವಣಾಧಿಕಾರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಸ್ವತಃ ಏಜೆಂಟ್ ಆಗುತ್ತಿದ್ದಾರೆಂದು ಕೇಳಿದೆ. ಅವರ ಉತ್ಸಾಹವನ್ನು ಇಡೀ ರಾಜ್ಯವೇ ಸ್ವಾಗತಿಸುತ್ತಿದೆ. ನಮ್ಮ ಎದುರಾಳಿಗಳು ಯಾರ ಜತೆ ಮಾತನಾಡುತ್ತಿದ್ದಾರೆಂದು ಮಾಹಿತಿ ಪಡೆಯುತ್ತೇವೆ. ನಮ್ಮದೇ ಸರ್ವೆ ತಂಡವಿದೆ. ಅವರಿಂದ ಕ್ಷೇತ್ರದ ಆಗುಹೋಗುಗಳ ಮಾಹಿತಿ ಪಡೆದುಕೊಳ್ಳುತ್ತೇವೆ. ಊರೂರಿಗೆ ಗಾಡಿ ಕಳುಹಿಸಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಕರೆಸುವ ತಂತ್ರ ರೂಪಿಸುತ್ತಿದ್ದಾರೆಂಬ ಮಾಹಿತಿ ಬಂದಿದೆ ಎಂದು ನುಡಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700