ನವದೆಹಲಿ : ಗಡಿ ವಿವಾದ ಸಂಬಂಧ ಇಂದು ದೆಹಲಿಯಲ್ಲಿ ಗೃಹ ಸಚಿವ ಅಮಿತಾ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಸಂಜೆ 7 ಗಂಟೆಗೆ ಸಭೆ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಸಂಜೆ 4 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಅಲ್ಲಿಂದ ನೇರವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉಭಯ ರಾಜ್ಯಗಳ ನಡುವಿನ ಗಡಿಯಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ಗಡಿ ವಿವಾದ ಸಂಬಂಧ ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಗಡಿ ಪ್ರಕರಣ ಕುರಿತು ಸುಪ್ರೀಂಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕುರಿತಾದ ಕಾನೂನು ನಿಯಮಗಳ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


