ಮೈಸೂರು : ಗಡಿ ವಿಚಾರವಾಗಿ ಕೇಂದ್ರ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದಾರೆ, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದಾರೆ, ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ, ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಕೂಡ ಚರ್ಚೆ ನಡೆಸಲಿದ್ದೇನೆ ಎಂದರು.
ಗಡಿ ವಿವಾದದ ಕುರಿತು ಸುಪ್ರೀಂಕೋರ್ಟ್ ನಲ್ಲಿರುವ ವರದಿ, ಗಡಿ ವಿಚಾರದ ಕಾನೂನು ನಿಯಮಗಳನ್ನು ಗೃಹ ಸಚಿವರ ಮುಂದಿಡುತ್ತೇನೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpagaxhmLTkOnd50sAy