ನಾಗ್ಪುರ : ಗಡಿ ವಿವಾದ ಸಂಬಂಧ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಪ್ರಚೋದನೆ ನೀಡುತ್ತಿದ್ದಾರೆ ಎಂದು ಮಹಾರಾಷ್ಟ್ರ ವಿಪಕ್ಷ ನಾಯಕ ಅಜಿತ್ ಪವಾರ್ ಆರೋಪಿಸಿದ್ದಾರೆ.
ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗಡಿ ವಿವಾದ ವಿಚಾರದ ಚರ್ಚೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಅಜಿತ್ ಪವಾರ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ದೇಶಪೂರ್ವಕವಾಗಿ ಗಡಿ ವಿಚಾರದಲ್ಲಿ ಪ್ರಚೋದನೆ ನೀಡುತ್ತಿದ್ದಾರೆ ಎಂದರು.
ಕರ್ನಾಟಕದ ಸಿಎಂ ನಮಗೆ ದ್ರೋಹ ಮಾಡಿದ್ರೂ ಸುಮ್ಮನಿದ್ದೇವೆ. ಗಡಿ ವಿವಾದದ ಬಗ್ಗೆ ಸರ್ಕಾರ ನಿರ್ಣಯ ಕೈಗೊಳ್ಳಬೇಕು. ಎಂಇಎಸ್ ನವರು ಕೊಲ್ಹಾಪುರಕ್ಕೆ ಬರುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy