ನವದೆಹಲಿ : ಗಡಿವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದ್ದು, ಶೀಘ್ರವೇ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆಗೆ ಸಭೆ ನಡೆಸಲಿದ್ದಾರೆ.
ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಕರ್ನಾಟಕದ ಮುಖ್ಯಮಂತ್ರಿಗೆ ಸೂಚಿಸಬೇಕು ಎಂದು ಹೇಳಿದೆ.
ಇನ್ನು ಗಡಿ ವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಎನ್‍ಸಿಪಿಯ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿರುವ ಗೃಹಸಚಿವ ಅಮಿತ್ ಶಾ, ಶೀಘ್ರವೇ ಸಿಎಂಗಳ ಸಭೆ ಕರೆಯುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy