ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಟೊಮೆಟೊ ಬೆಲೆ ಮತ್ತೆ ಗಗನಕ್ಕೇರಿದೆ.
ಅಕಾಲಿಕ ಮಳೆಯಿಂದ ರೈತರು ಬೆಳೆದ ಬೆಳೆ ಸಂಪೂರ್ಣವಾಗಿ ನಾಶವಾಗುತ್ತಿದ್ದು, ಇದ್ದರಿಂದ ರೈತರು ಕಂಗಲಾಗಿದ್ದಾರೆ.
ಅದರಲ್ಲೂ ಟೊಮೆಟೊ ಬೆಳೆ ಹೊಲದಲ್ಲೇ ಕೊಳೆಯುತ್ತಿದೆ. ಹೀಗಾಗಿ ಟೊಮೆಟೊ ದರ ಗಗನಕ್ಕೇರಿದೆ.
ದಿಢೀರನೇ ಒಂದು ಕೆಜಿ ಟೊಮೆಟೊಗೆ ೯೦ ರಿಂದ ೧೦೦ ರೂಪಾಯಿ ಬೆಲೆ ಏರಿಕೆಯಾಗಿದೆ. ಕಳೆದ ಎರಡು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಟೊಮೆಟೊ ಮಾರುಕಟ್ಟೆಗೆ ಬರುತ್ತಿಲ್ಲ. ಜಿಲ್ಲೆಯ ಎಪಿಎಂಸಿ ಮಾರುಕಟ್ಟೆಗೆ ಹೆಬ್ಬೂರು, ಗುಬ್ಬಿ, ಹೊನ್ನುಡಿಕೆ, ಉರ್ಡಿಗೆರೆ, ಕೊರಟಗೆರೆ, ತಿಪಟೂರು ಕಡೆಯಿಂದ ಅತಿಹೆಚ್ಚು ಮಾರುಕಟ್ಟೆಗೆ ಟೊಮೆಟೊ ಬರುತ್ತಿತ್ತು.
ಮಾರುಕಟ್ಟೆಗೆ ದಿನಕ್ಕೆ ಐದಾರು ಲಾರಿಯಲ್ಲಿ ಟೊಮೆಟೊ ಬರುತ್ತಿತ್ತು. ಆದರೆ ಸದ್ಯ ಒಂದು ಲಾರಿಯಲ್ಲಿ ಮಾತ್ರ ಬರುತ್ತಿದೆ. ಟೊಮೆಟೊ ದರ ಏರಿಕೆಯಾಗಿರುವ ಕಾರಣ ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಇದೇ ರೀತಿ ಮಳೆ ಮುಂದುವರೆದರೆ, ಮತ್ತೆ ಟೊಮೆಟೊ ದರ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲೂ ಕೂಡ ಟೊಮೆಟೊ ಬೆಲೆ ೧೦೦ ರ ಗಟಿ ದಾಟಿತ್ತು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB