ನವದೆಹಲಿ: ಶಾಸಕ ಗಾಲಿ ಜನಾರ್ಧನ ರೆಡ್ಡಿ ತವರು ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವು ಮಾಡಿದೆ.
ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯಬೇಕಿತ್ತು. ಇದನ್ನು ಪ್ರಶ್ನಿಸಿ ಜನಾರ್ಧನ ರೆಡ್ಡಿ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ, ಬಳ್ಳಾರಿ , ಕಡಪ ಮತ್ತು ಅನಂತಪುರ ಜಿಲ್ಲೆಗಳಿಗೆ ತೆರಳಲು ಹಾಕಿದ್ದ ನಿರ್ಬಂಧವನ್ನು ತೆರವು ಮಾಡಿತು.
ಈ ಹಿಂದೆ ರೆಡ್ಡಿ ತಮ್ಮ ಪುತ್ರಿಯ ವಿವಾಹ ಹಾಗೂ ಹೆರಿಗೆ ಸಂದರ್ಭದಲ್ಲಿ ಮಾತ್ರ ಬಳ್ಳಾರಿ ಪ್ರವೇಶಕ್ಕೆ ನ್ಯಾಯಾಲಯ ಅನುಮತಿ ನೀಡಿತ್ತು. ಅವರು ಜಿಲ್ಲೆಗೆ ಬಂದರೆ ಅಕ್ರಮ ಗಣಿಕಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದೆಂಬ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹಾಕಲಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:


