ಹೆಚ್. ಡಿ.ಕೋಟೆ ತಾಲ್ಲೂಕಿನಲ್ಲಿ ಗ್ರಾಮೀಣ ದಸರಾ ಪ್ರಯುಕ್ತ ಕೆಸರುಗದ್ದೆ ಓಟ ಆಯೋಜನೆ ಮಾಡಲಾಗಿತ್ತು.
ಕೆಸರು ಗದ್ದೆ ಓಟದ ಉಸ್ತುವಾರಿ ವಹಿಸಿದ್ದ ಕೃಷಿ ಅಧಿಕಾರಿ ರಂಗಸ್ವಾಮಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಕೆಸರು ಗದ್ದೆ ಓಟದಲ್ಲಿ ಹಲವಾರು ಉತ್ಸಾಹಿ ರೈತರು ಮತ್ತು ರೈತ ಮಹಿಳೆಯರು ಭಾಗವಹಿಸಿ ತಮ್ಮ ಕ್ರೀಡಾ ಆಸಕ್ತಿಯನ್ನು ಪ್ರದರ್ಶನ ಗೊಳಿಸಿದ್ದಾರೆ. ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಒದಗಿಸಿ ಕೊಟ್ಟಿರುವುದು ಸಂತೋಷವನ್ನುಂಟು ಮಾಡಿದೆ ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಕೆಸರು ಗದ್ದೆ ಓಟದ ಸ್ಪರ್ದೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ತಾಲ್ಲೂಕು ಆಡಳಿತ ಆಯೋಜನೆ ಮಾಡಿದ್ದ ಎಲ್ಲಾ ಕ್ರೀಡಾಕೂಟಗಳಿಗಿಂತ, ವಿಭಿನ್ನವಾಗಿ ಕೃಷಿ ಅಧಿಕಾರಿ ರಂಗಸ್ವಾಮಿ ಕೆಸರುಗದ್ದೆ ಓಟವನ್ನು ಆಯೋಜನೆ ಮಾಡಿರುವುದು ವಿಶೇಷವಾಗಿ ಗಮನ ಸೆಳೆಯಿತು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy