ಅಕ್ಟೋಬರ್ 21ರಂದು ನಡೆಯುವ ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್ ಗೆ ಆಗಮಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಡಾ.ರಾಜ್ ಕುಟುಂಬ ಆಹ್ವಾನ ನೀಡಿತು.
ಪುನೀತ್ ರಾಜ್ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಇದರ ಟ್ರೇಲರ್ ಆಗಿದ್ದು, ಸಖತ್ ಸದ್ದು ಮಾಡುತ್ತಿದೆ. ಅಕ್ಟೋಬರ್ 21ರಂದು ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದ್ದು ಪುನೀತ್ ರಾಜ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್, ಹಿರಿಯ ನಟ ರಾಘವೇಂದ್ರ ರಾಜ್ಕುಮಾರ್, ಯುವ ರಾಜ್ಕುಮಾರ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು.
ಸಿನಿಮಾದ ರೀತಿ ಚಿತ್ರಮಂದಿರದಲ್ಲೇ ಗಂಧದಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಅ.21ರಂದು ನಡೆಯಲಿರುವ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ವಿನಂತಿಸಿಕೊಂಡಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್’ನಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ‘ಪುನೀತ ಪರ್ವ’ ಎಂದು ಕರೆಯಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


