nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರದ ಸೌಲಭ್ಯ ಕಾಣದ ಗಾಂಧಿನಗರ ಗ್ರಾಮಕ್ಕೆ ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ್ ಭೇಟಿ
    ಕೊರಟಗೆರೆ September 8, 2022

    ಸರ್ಕಾರದ ಸೌಲಭ್ಯ ಕಾಣದ ಗಾಂಧಿನಗರ ಗ್ರಾಮಕ್ಕೆ ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ್ ಭೇಟಿ

    ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು: ತಹಶೀಲ್ದಾರ್ ನಹೀದ ಜಂ ಜಂ
    By adminSeptember 8, 2022No Comments2 Mins Read
    handralu nagabhushan

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಪಟ್ಟಣ ಗ್ರಾಮ ಪಂಚಾಯತಿಗೆ ವ್ಯಾಪ್ತಿಯ ಗಾಂಧಿನಗರ ಗ್ರಾಮದ ಸಿದ್ಧರಾಜು ಎಂಬುವರ ಗುಡಿಸಿಲಿನ ಮನೆಗೆ ಬೆಂಕಿ ತಗುಲಿ ಗುಡಿಸಲು ಸುಟ್ಟ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಜುರವರ ಗುಡಿಸಲಿನ ಮನೆಗೆ ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕರಾದ ಹಂದ್ರಾಳ್ ನಾಗಭೂಷಣ್ ಭೇಟಿ ನೀಡಿ ಪರಶೀಲನೆ ನಡೆಸಿದರು.

    ನಂತರ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಗಾಂಧಿನಗರ ಗ್ರಾಮದ ದುಸ್ಥಿತಿಯನ್ನು ನೋಡಿದ ನಾನು ಮತ್ತು ನನ್ನ ಸೇಹಿತರ ತಂಡ ಈ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದೇವೆ. ತಹಶೀಲ್ದಾರ್ ರವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸ್ಥಳೀಯ ಗ್ರಾಮ ಪಂಚಾಯತ್ ವತಿಯಿಂದ ಶಾಸಕರ ವಿಶೇಷ ಅನುದಾನದ ಅಡಿ ಹೆಚ್ಚುವರಿ ಮನೆಗಳನ್ನು ನಿರಾಶ್ರಿತರಿಗೆ ಮಂಜೂರು ಮಾಡಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿದ್ದೇನೆ. ತಹಶೀಲ್ದಾರ್ ನಹೀದ ಜಂ ಜಂ ರವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಈಗಾಗಲೇ ಈ ಗ್ರಾಮಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಸರ್ಕಾರದಿಂದ ನೀಡಬಹುದಾದ ಸೌಕರ್ಯಗಳನ್ನು ಶೀಘ್ರವೇ ಒದಗಿಸುವ ಕೆಲಸವನ್ನು ಮಾಡುತ್ತೇವೆ ಎಂದು ನಮಗೆ ತಿಳಿಸಿದ್ದಾರೆಂದು ಹಂದ್ರಾಳು ನಾಗಭೂಷಣ್ ತಿಳಿಸಿದರು.

    ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಮಯ್ಯ ಮಾತನಾಡಿ, ಮೂರ್ನಾಲ್ಕು ದಿನಗಳ ಹಿಂದೆ ಗುಡಿಸಲು ಸುಟ್ಟು ನಾಶವಾದ ಸಂತ್ರಸ್ತ ಸಿದ್ದರಾಜು ಮನವಿ ಸ್ಪಂದಿಸಿ ನಾನು ವೈಯಕ್ತಿಕ ಧನಸಹಾಯ ಮಾಡುವುದರ ಜೊತೆಗೆ, ಹೊಸದಾಗಿ ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಕೊಡಲು ತಾ.ಪಂ ಇಒ ದೊಡ್ಡಸಿದ್ದಯ್ಯನವರಿಗೆ ದೂರವಾಣಿ ಮೂಲಕ ಕರೆಮಾಡಿ ಸಮಸ್ಯೆ ತಿಳಿಸಿದ ವೇಳೆ ಇಒ ಈ ಆರ್ಥಿಕ ವರ್ಷದಲ್ಲಿ ಮನೆ ಮಂಜೂರು ಮಾಡುತ್ತೇವೆ ಎಂದು ತಿಳಿಸಿದ್ದಾರೆ ಎಂದು ತಿಳಿಸಿದರು.

    ಗ್ರಾಮದ ಗುಡಿಸಲು ಮನೆಯ ನಿವಾಸಿ ಸಿದ್ದರಾಜು ಮತನಾಡಿ, ನಾವು ಗುಡಿಸಲಿನಲ್ಲಿ ಸೀಮೆಎಣ್ಣೆ ದೀಪದ ಬೆಳಕಿನಿಂದ ರಾತ್ರಿ ಇಡಿ ಜೀವನ ಸಾಗಿಸುತ್ತಿದ್ದೆವು ಗುಡಿಸಲಿನಲ್ಲಿ ಯಾರೂ ಇಲ್ಲದ ವೇಳೆ ಅನಾಹುತವಾಗಿದೆ. ನಾವು ಕೂಲಿ ಕೆಲಸಕ್ಕೆ ಹೋಗಿದ್ದೆವು. ಕೆಲಸ ಮಾಡುತ್ತಿದ್ದಾಗ ನಮ್ಮೂರಿನ ಯುವಕ ನನಗೆ ಫೋನ್ ಮಾಡಿ ಗುಡಿಸಲು ಹತ್ತಿ ಉರಿಯುತ್ತಿರುವ ಬಗ್ಗೆ ತಿಳಿಸಿದರು. ತಕ್ಷಣವೇ ನಾನು ಬಂದು ನೋಡಿದಾಗ ಗುಡಿಸಲು ಸುಟ್ಟು ಹೋಗಿತ್ತು. ಗುಡಿಸಲಿನಲ್ಲಿದ್ದ ಎರಡು ಚೀಲ ರಾಗಿ ಮತ್ತು ಬಟ್ಟೆ ಸುಟ್ಟು ಹೋಗಿದ್ದವು. ಎರಡು-ಮೂರು ವರ್ಷದ ಹಿಂದೆಯೇ ಅಶ್ರಯ ಯೋಜನೆಯಲ್ಲಿ ಮನೆ ಮಂಜೂರು ಮಾಡಿ ಕೊಡಲು ಗ್ರಾಮ ಪಂಚಾಯತ್ ಗೆ ಅರ್ಜಿ ಕೊಟ್ಟಿದ್ದೇನೆ. ಅದರೆ ಈವರೆಗೂ ನಮಗೆ ಮನೆ ಮಂಜೂರು ಮಾಡಿಕೊಟ್ಟಿಲ್ಲ ಎಂದು ಅಳಲು ತೋಡಿಕೊಂಡರು.

    ನಂತರ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ವೀರಭದ್ರರಾದ್ಯ ಮಾತನಾಡಿ, ನಾನು ಗ್ರಾಮ ಪಂಚಾಯತ್ ಪಿಡಿಒ ಆಗಿ ಬಂದು 20 ದಿನಗಳಾಗಿದೆ. ಈಗಾಗಲೇ ತಹಶೀಲ್ದಾರ್ ಮತ್ತು ತಾಪಂ ಇಒ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. 8 ವರ್ಷಗಳ ಹಿಂದೆಯೇ ಮನೆ ಪಟ್ಟಿ ಮಾಡಿ ತಾ.ಪಂ.ಗೆ ಕೊಟ್ಟಿದ್ದಾರೆ ಎಂದು ನನಗೆ ಮಾಹಿತಿ ತಿಳಿದುಬಂದಿದೆ. ನಾನು ಈ ಪಂಚಾಯತಿಯಲ್ಲಿ ಅಧಿಕಾರ ವಹಿಸಕೊಂಡ ಮೇಲೂ ಹೊಸದಾಗಿ ಗುಡಿಸಲು ಮನೆಗಳ ಪಟ್ಟಿಯನ್ನು ತಾಪಂ ಇಒ ದೊಡ್ಡಸಿದ್ದಯ್ಯನವರಿಗೆ ಕಳುಹಿಸಿ ಕೊಟ್ಟಿದ್ದೇನೆ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ಮನೆ ಮಂಜೂರು ಮಾಡಿಕೊಡಲು ಮೇಲಾಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

    ಈ ಸಂದರ್ಭದಲ್ಲಿ ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕರಾದ ಹಂದ್ರಾಳು ನಾಗಭೂಷಣ್, ನಟರಾಜು, ಮಂಜುನಾಥ ಮತ್ತು ಪದಾಧಿಕಾರಿಗಳು, ಹಾಗೂ ಕರ್ನಾಟಕ ರಣಧೀರರ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುಸ್ವಾಮಿ ಎಂ.ಎನ್., ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವರಾಮಯ್ಯ, ಪಿಡಿಒ ವೀರಭದ್ರರಾಧ್ಯ, ಗ್ರಾಮದ ಹಿರಿಯ ಮುಖಂಡರು, ಸ್ಥಳೀಯ ನಿವಾಸಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ, ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.