ಯಾದಗಿರಿ: ಸದಾ ವಿವಾದಾತ್ಮಕ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರ ಕುರಿತು ನೀಡಿದ ಹೇಳಿಕೆಯಿಂದ ಹೊಸ ಸಂಚಲನ ಸೃಷ್ಟಿಸಿದ್ದಾರೆ.
ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿ ಆಯೋಜಿಸಲಾಗಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ರಾಷ್ಟ್ರನಾಯಕರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
ಯತ್ನಾಳ್ ಹೇಳಿದ್ದೇನು?
“ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಅವರು ಪಾಕಿಸ್ತಾನದ ರಾಷ್ಟ್ರಪಿತ. ನಾನು ಅವರನ್ನು ಭಾರತದ ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ, ನಮಗೆ ಅಂಬೇಡ್ಕರ್ ಅವರು ಇದ್ದರೆ ಸಾಕು” ಎಂದು ಯತ್ನಾಳ್ ಗುಡುಗಿದ್ದಾರೆ.
ದೇಶದ ಮೊದಲ ಪ್ರಧಾನಿ ವಿಚಾರವಾಗಿಯೂ ಮಾತನಾಡಿದ ಅವರು, “ಜವಾಹರಲಾಲ್ ನೆಹರು ಅವರನ್ನು ಮೊದಲ ಪ್ರಧಾನಿ ಎಂದು ನಾನು ಒಪ್ಪಲ್ಲ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರೇ ದೇಶದ ಮೊದಲ ಪ್ರಧಾನಿ” ಎಂದು ವಾದಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


