ಹೆಚ್.ಡಿ.ಕೋಟೆ: ಇಲ್ಲಿನ ಗುಂಡ್ರೆ ಅರಣ್ಯ ಪ್ರದೇಶದಲ್ಲಿ ಗಂಡು ಹುಲಿಯೊಂದರ ಮೃತದೇಹ ಪತ್ತೆಯಾಗಿದ್ದು, ಕಬಿನಿ ಹಿನ್ನೀರಿನ ನಾಯಳ್ಳ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
7ರಿಂದ 8ವರ್ಷ ವಯಸ್ಸಿನ ಹುಲಿ ಇದಾಗಿದ್ದು, ಹುಲಿಗಳ ನಡುವಿನ ಕಾಳಗದಲ್ಲಿ ಸಾವನ್ನಪ್ಪಿರಬಹುದು ಎಂದು ಹೇಳಲಾಗಿದೆ. ಹುಲಿಯ ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಲಾಗಿದೆ.
ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗೆ ಹುಲಿಯ ಮೃತದೇಹ ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿ.ಎಫ್. ಕರಿಕಾಳನ್ ಸಹಿತ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy