ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಡ್ಯಾಂ ಕಾಲುವೆ ಬಳಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕ್ರೇನ್ ಪಲ್ಟಿಯಾಗಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
35 ಅಡಿ ಎತ್ತರದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಶನಿವಾರ ರಾತ್ರಿ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ತುಂಗಭದ್ರಾ ಡ್ಯಾಂ ಕಾಲುವೆ ಬಳಿ ಗಣೇಶ ಮೂರ್ತಿ ಇದ್ದ ಕ್ರೇನ್ ಪಲ್ಟಿಯಾಗಿದೆ.
ತುಂಗಭದ್ರಾ ಡ್ಯಾಂನ ಇವಿ ಕ್ಯಾಂಪ್ ನಿವಾಸಿ ಅಶೋಕ್ (18) ಮೃತಪಟ್ಟವರು. ನಿಖಿಲ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿಯೂ ಗಂಭೀರವಾಗಿದೆ.
ಹೊಸಪೇಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ 35 ಅಡಿ ಅತ್ತರದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಶನಿವಾರ ನಡೆದಿತ್ತು. ಟಿಬಿ ಡ್ಯಾಂ ಕಾಲುವೆಯಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ಸಕಲ ತಯಾರಿ ನಡೆದಿತ್ತು.
ವಾಹನದಿಂದ ಗಣೇಶ ಮೂರ್ತಿಯನ್ನು ಕ್ರೇನ್ ಮೂಲಕ ಎತ್ತಿ ಕಾಲುವೆಗೆ ಇಳಿಸುವಾಗ ಕ್ರೇನ್ ಪಲ್ಟಿಯಾಗಿದೆ. ಆಗ ಇಬ್ಬರು ಯುವಕರು ಅದರ ಅಡಿ ಸಿಲುಕಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz