ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ದರೋಡೆ ನಡೆಸಿದ ಇಬ್ಬರು ಆರೋಪಿಗಳನ್ನು ಕೇಂದ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಣೇಶ್ (23) ಮತ್ತು ಶರವಣ (35) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಆರೋಪಿಗಳ ವಿರುದ್ಧ ಈಗಾಗಲೇ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ.
ಜ.19ರಂದು ರಾತ್ರಿ ಸುಮಾರು 11.30ಕ್ಕೆ ಕೆ.ಆರ್.ಮಾರುಕಟ್ಟೆ ಗೋಡೌನ್ ಸ್ಟ್ರೀಟ್ ನಲ್ಲಿ ತಮಿಳುನಾಡು ಮೂಲದ 37 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, 650 ರೂ. ನಗದು, ಚಿನ್ನದ ತಾಳಿ, ಓಲೆ, ಬೆಳ್ಳು ಕಾಲು ಚೈನ್ ಹಾಗೂ ಮೊಬೈಲ್ ದೋಚಿಕೊಂಡು ಆರೋಪಿಗಳು ಪರಾರಿಯಾಗಿದ್ದರು.
ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx