ಮಂಡ್ಯ: 8 ವರ್ಷದ ಬಾಲಕಿ ಮೇಲೆ ಮೂವರು ಕಾಮುಕರು ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿಗೆ ಕೇಕ್ ಕೊಡಿಸಿ, ಚಾಕು ತೋರಿಸಿ ಬೆದರಿಸಿ, ಸರ್ಕಾರಿ ಶಾಲೆಯ ಆವರಣದಲ್ಲೇ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.
ಸದ್ಯ ಅಸ್ವಸ್ಥಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಜ.31ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತೀವ್ರ ಹೊಟ್ಟೆ ನೋವು ಹಾಗೂ ರಕ್ತಸ್ರಾವದಿಂದ ಬಾಲಕಿ ಬಳಲುತ್ತಿರುವುದನ್ನು ಕಂಡು ಆಕೆಯ ಚಿಕ್ಕಮ್ಮ ವಿಚಾರಿಸಿದಾಗ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಳು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx