ಹಾಸನ: ಬುದ್ಧಿಮಾಂದ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನೊಂದ ಯುವತಿಯ ಸಹೋದರ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ ಅತ್ಯಾಚಾರದ ವೀಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ವೀಡಿಯೋ ನೋಡಿದಾಗ ತನ್ನ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
ವೀಡಿಯೋ ಕಳುಹಿಸಿ ನಂತರ ದುರುಳರು ಡಿಲೀಟ್ ಮಾಡಿದ್ದರು. ಆದರೆ ಅಷ್ಟುಹೊತ್ತಿಗಾಗಲೇ ಸಂತ್ರಸ್ತೆ ಸಹೋದರ ವೀಡಿಯೋವನ್ನು ತನ್ನ ಸ್ನೇಹಿತನ ಮೊಬೈಲ್ ಗೆ ಫಾರ್ವರ್ಡ್ ಮಾಡಿದ್ದ. ಘಟನೆ ಸಂಬಂಧ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷ, ಉಮ್ರಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC