ಮುಂಬೈ: 15 ವರ್ಷದ ಶಾಲಾ ಬಾಲಕಿಯ ಮೇಲೆ ಐವರು ಕಾಮುಕರು ಸುಮಾರು 3 ತಿಂಗಳುಗಳಿಂದ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮುಂಬೈಯ ಕಲಾಚೌಕಿ ಪ್ರದೇಶದಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ 25 ವರ್ಷದ ಯುವಕ ಸೇರಿದಂತೆ ನಾಲ್ವರು ಬಾಲಾಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯೊಬ್ಬನ ಗೆಳತಿ ಸಂತ್ರಸ್ತ ಬಾಲಕಿಯ ಮನೆಗೆ ಬಂದು, ತನ್ನ ಗೆಳೆಯನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಪ್ರಶ್ನಿಸಿದಾಗ ವಿಚಾರ ಬೆಳಕಿಗೆ ಬಂದಿದೆ. ಪೋಷಕರು ಬಾಲಕಿಯ ಮೊಬೈಲ್ ಪರಿಶೀಲಿಸಿದ ವೇಳೆ ವಿಡಿಯೋಗಳು ಮತ್ತು ಸಂದೇಶಗಳು ಪತ್ತೆಯಾಗಿವೆ, ಇದರಿಂದ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಬಾಲಕಿಯ ಪೋಷಕರು ಸಲ್ಲಿಸಿದ ದೂರಿನ ಆಧಾರದ ಮೇಲೆ, ಐದು ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC