ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಾಲ್ವರು ಕಾಮುಕರ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಈ ಘಟನೆ ನಡೆದಿದ್ದು ಶುಕ್ರವಾರ ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕೊರಮಂಗಲ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಗಳನ್ನು ಅಜಿತ್, ವಿಶ್ವಾಸ್, ಶಿವು ಎಂದು ಗುರುತಿಸಲಾಗಿದೆ, ಇವರು ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ಮೂಲದವರಾಗಿದ್ದಾರೆ.
ಸಂತ್ರಸ್ತ ಮಹಿಳೆ ಜ್ಯೋತಿ ನಿವಾಸ್ ಕಾಲೇಜು ಜಂಕ್ಷನ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ 20 ವರ್ಷದ ನಾಲ್ವರು ಮಹಿಳೆ ಜೊತೆಗೆ ಮಾತನಾಡಲು ಆರಂಭಿಸಿದ್ದು, ಬಳಿಕ ಸ್ನೇಹ ಬೆಳೆಸಿಕೊಂಡು ಹೊಟೇಲ್ ಗೆ ಊಟಕ್ಕೆ ಆಹ್ವಾನಿಸಿದ್ದಾರೆ. ಬಳಿಕ ಹೊಟೇಲ್ ನ ಟೆರೆಸ್ ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅತ್ಯಾಚಾರದ ನಂತರ ಬೆಳಿಗ್ಗೆ 6 ಗಂಟೆಗೆ ಮಹಿಳೆಯ ಮೊಬೈಲ್, ಪರ್ಸ್ ಕಿತ್ತುಕೊಂಡು ಮಹಿಳೆಯನ್ನು ಸ್ಥಳದಿಂದ ಓಡಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4