ವಿಶಾಖಪಟ್ಟಣಂ: ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ಐಟಿ ಆಕ್ಟ್ 2000 ರಿಂದ 2008 ರ ಸೆಕ್ಷನ್ 67 (ಎ) ಸೇರಿದಂತೆ BNS ಸೆಕ್ಷನ್ 70(1), 77, 351(2), 69 ಮತ್ತು 75(1) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಸಂತ್ರಸ್ತೆಯ ಗೆಳೆಯ (ವಂಶಿ) ಮತ್ತು ಆತನ ಮೂವರು ಆಪ್ತರು ಆರೋಪಿಗಳಾಗಿದ್ದಾರೆ ಎಂದು ವಿಶಾಖಪಟ್ಟಣಂ ಪೊಲೀಸ್ ಕಮಿಷನರ್ ಶಂಕ ಬ್ರತಾ ಬಾಗ್ಚಿ ತಿಳಿಸಿದ್ದಾರೆ. ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೆಲವು ವೀಡಿಯೊಗಳೊಂದಿಗೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪವನ್ನು ಆರೋಪಿಗಳು ಎದುರಿಸುತ್ತಿದ್ದಾರೆ.
ಪ್ರಮುಖ ಆರೋಪಿ ವಂಶಿ ಮತ್ತು ಕಾನೂನು ವಿದ್ಯಾರ್ಥಿಯು ಒಂದು ವರ್ಷಕ್ಕೂ ಹೆಚ್ಚು ಕಾಲ ಸಂಬಂಧ ಹೊಂದಿದ್ದರು ಎನ್ನಲಾಗಿದೆ.
ಆಗಸ್ಟ್ 13, 2024 ರಂದು ಕೃಷ್ಣ ನಗರದಲ್ಲಿನ ತನ್ನ ಸ್ನೇಹಿತನ ಕೊಠಡಿಗೆ ಯುವತಿಯನ್ನು ಕರೆದೊಯ್ದಿದ್ದ ವಂಶಿ, ಅತ್ಯಾಚಾರ ನಡೆಸಿದ್ದಲ್ಲದೇ ತನ್ನ ಸ್ನೇಹಿತರಿಂದಲೂ ಅತ್ಯಾಚಾರ ನಡೆಸಿದ್ದಾನೆ. ಬಳಿಕ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q