ತುಮಕೂರು: ಗ್ಯಾಂಗ್ ರೇಪ್ ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಎರಡನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದ್ದು, ನ್ಯಾಯಾಧೀಶರಾದ ಹೆಚ್. ಅನಂತ್ ಅವರಿಂದ ಶಿಕ್ಷೆ ಪ್ರಕಟಗೊಂಡಿದೆ.
ಇಬ್ಬರು ಆರೋಪಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ತಲಾ 1,62,000 ರೂ. ದಂಡ ವಿಧಿಸಲಾಗಿದೆ.
ಆರೋಪಿಗಳಾದ ಮಹಂತೇಶ್, ಶ್ರೀನಿವಾಸ್ ಕಾರಿನಲ್ಲಿ ಅತ್ಯಾಚಾರ ಮಾಡಿದ್ದರು. ಅತ್ಯಾಚಾರ ಮಾಡಿದ್ದನ್ನು ವಿಡಿಯೋ ಮಾಡಿಕೊಂಡಿದ್ದರು. ನಿರ್ಭಯಾ ಕೇಸ್ ಗೂ ಮೂರು ತಿಂಗಳ ಮೊದಲು ನಡೆದಿದ್ದ ಪ್ರಕರಣ ಇದಾಗಿತ್ತು.
ಮೂವರು ಗೆಳತಿಯರ ಪೈಕಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಓರ್ವ ಯುವತಿಯಿಂದ ಮಾತ್ರ ದೂರು ದಾಖಲಾಗಿತ್ತು. ತನಿಖೆಯಿಂದ ಮತ್ತೋರ್ವ ಯುವತಿ ಮೇಲಿನ ಅತ್ಯಾಚಾರ ಬೆಳಕಿಗೆ ಬಂದಿತ್ತು. ಓರ್ವ ಕಾರು ಡ್ರೈವ್ ಮಾಡುತ್ತಿದ್ದರೆ, ಮತ್ತೊಬ್ಬ ಅತ್ಯಾಚಾರ ಮಾಡುತ್ತಿದ್ದನು. ಇವನು ಕಾರು ಓಡಿಸಬೇಕಾದರೆ, ಅವನು ಅತ್ಯಾಚಾರ ಮಾಡುತ್ತಿದ್ದ.
ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ಮಾಡಿದ್ದ ಆರೋಪಿಗಳು ಕುರಿತು ಶಿರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇನ್ಸ್ ಪೆಕ್ಟರ್ ಎಸ್.ಕೆ. ಪ್ರಹ್ಲಾದ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕಿ ವಿ.ಎ.ಕವಿತ ವಾದ ಮಂಡನೆ ಮಾಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q