ಶಹಜಾನ್ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ 594 ಕಿ.ಮೀ. ಉದ್ದದ ಸುಮಾರು ₹ 36,230 ಕೋಟಿ ರೂ. ವೆಚ್ಚದ ಗಂಗಾ ಎಕ್ಸ್‌ಪ್ರೆಸ್‌ವೇಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಗಂಗಾ ಎಕ್ಸ್ಪ್ರೆಸ್ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯುವಕರಿಗೆ ಉದ್ಯೋಗ ಪಡೆಯಲು ಇದು ಸಹಕಾರಿಯಾಗಿದೆ. ಜತೆಗೆ ಗಂಗಾ ಎಕ್ಸ್ಪ್ರೆಸ್ ಹೈವೇ ಕೆಲಸ ಇಂದಿನಿಂದಲೇ ಪ್ರಾರಂಭವಾಗಲಿದೆ ಎಂದರು.
ಮೀರತ್, ಹಾಪುರ್, ಬುಲಂದ್‌ಶಹರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್‌ಪುರ್, ಹರ್ದೋಯಿ, ಉನ್ನಾವೋ, ರಾಯ್‌ಬರೇಲಿ, ಪ್ರತಾಪ್‌ಗಢ್ ಮತ್ತು ಪ್ರಯಾಗ್‌ರಾಜ್‌ನಲ್ಲಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ. ಸುಮಾರು 600 ಕಿ.ಮೀ. ಉದ್ದದ ಈ ಎಕ್ಸ್‌ಪ್ರೆಸ್‌ವೇಗೆ 36,000 ಕೋಟಿ ರೂ.ಗೂ ಹೆಚ್ಚು ವೆಚ್ಚವಾಗಲಿದೆ. ಗಂಗಾ ಎಕ್ಸ್ ಪ್ರೆಸ್‌ವೇ ಈ ಪ್ರದೇಶದಲ್ಲಿ ಹೊಸ ಕೈಗಾರಿಕೆಗಳನ್ನು ತರುತ್ತದೆ ಎಂದಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700