ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿ ತಿರುಮಣಿ ಗ್ರಾ.ಪಂ. ವ್ಯಾಪ್ತಿಯ ಆರ್.ಅಚ್ಚಮ್ಮನಹಳ್ಳಿ ಗ್ರಾಮದ ಬಳಿ ಬೆಳೆಯಲಾಗಿದ್ದ ಸುಮಾರು 61 ಕೆ.ಜಿ. ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದೇ ಗ್ರಾಮದ ಸಿದ್ದಪ್ಪ(67) ಅವರನ್ನು ಬಂಧಿಸಲಾಗಿದೆ. ಸೋಲಾರ್ ಪ್ಲಾಂಟ್ ಬ್ಲಾಕ್ 34 ಪಕ್ಕದ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಮಾಹಿತಿ ಆಧರಿಸಿ ಸರ್ಕಲ್ ಇನ್ ಸ್ಪೆಕ್ಟರ್ ಕಾಂತರೆಡ್ಡಿ ನೇತ್ರತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿದೆ.
ಆರೋಪಿಯನ್ನು ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿರುಮಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz