ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು
ಹಾವೇರಿಯ ಗುರುಭವನದಲ್ಲಿ ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಈ ಭಾಗದಲ್ಲಿ ದನಕರುಗಳಿಗೆ ಗಂಟು ರೋಗ ಕಂಡುಬಂದಿದೆ.
ಗಂಟುರೋಗ ಹರಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಅದಕ್ಕೆ ಈಗಾಗಲೇ ವಿಶೇಷ ತಂಡವನ್ನು ಕಳಿಸಲಾಗುವುದು ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


