ದೇಶೀಯವಾಗಿ ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಹೋರಾಟ ಮಾಡುವ ಲಸಿಕೆಯನ್ನು ಭಾರತೀಯ ಸೆರಂ ಸಂಸ್ಥೆ ಅಭಿವೃದ್ದಿ ಪಡಿಸಿದೆ.
ದೇಶೀಯವಾಗಿ ಅಭಿವೃದ್ಧಿಪಡಿಸಿದ ಮೊದಲ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆಯ ಸಾಧಕ-ಬಾಧಕಗಳ ಕುರಿತು ನಿರ್ಧಾರ ಕೈಗೊಳ್ಳಲು ತಜ್ಞರ ಸಮಿತಿ ಮುಂದಾಗಿದೆ.
ಕ್ಯೂಎಚ್‌ಪಿವಿ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಅನುಮತಿ ಕೋರಿ ಜೂನ್ ೮ ರಂದು ಭಾರತೀಯ ಔಷಧ ಮಹಾ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಲಾಗಿದ್ದು ಅನುಮತಿ ನೀಡಲಾಗುತ್ತಿದೆ.
ಡಿಜಿಸಿಐನ ಸರ್ಕಾರ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅನುಮತಿಗೆ ಅರ್ಜಿ ಸಲ್ಲಿಸಿದ್ದು ಈ ಲಸಿಕೆ ಎಲ್ಲಾ ವಯೋಮಾನದವರಲ್ಲಿ ದೇಹದಲ್ಲಿ ಪ್ರತಿಕಾಯ ಶಕ್ತಿ ಹೆಚ್ಚು ಹೊಂದಿದೆ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಲಸಿಕೆಯನ್ನು 2022ರ ವರ್ಷದ ಅಂತ್ಯದ ಮೊದಲು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ದೇಶದಲ್ಲಿ ಲಸಿಕೆ ಆರಂಭಿಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು, ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ, ಜೈವಿಕ ತಂತ್ರಜ್ಞಾನ ಇಲಾಖೆಯ ಬೆಂಬಲದೊಂದಿಗೆ ಹಂತದ ಎರಡು ಮೂರು ಹಂತದ ಕ್ಲಿನಿಕಲ್ ಪ್ರಯೋಗವನ್ನು ಪೂರ್ಣಗೊಳಿಸಿದ ನಂತರ ಮಾರುಕಟ್ಟೆ ಅಧಿಕಾರಕ್ಕಾಗಿ ಅರ್ಜಿ ಸಲ್ಲಿಸಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB