ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿ ಗರ್ಭಿಣಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಅವರ 2 ವರ್ಷದ ಗಂಡು ಮಗು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮಧುಶ್ರೀ(25) ಮೃತಪಟ್ಟ ಗರ್ಭಿಣಿಯಾಗಿದ್ದು, ಇವರನ್ನು ನಾಲ್ಕು ವರ್ಷಗಳ ಹಿಂದೆ ನಿಟ್ಟೂರು ಹೋಬಳಿಯ ಅಮ್ಮನಹಳ್ಳಿ ಗ್ರಾಮದ ಶಿಕ್ಷಕ ಯೋಗೀಶ್ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಭಾನುವಾರ ಸಂಜೆ ಯೋಗೀಶ್ ಅವರು ಮಧುಶ್ರೀ ತಂದೆ, ತಾಯಿಗೆ ಕರೆ ಮಾಡಿ, ಪತ್ನಿ ನಾಪತ್ತೆಯಾಗಿರುವ ವಿಚಾರ ತಿಳಿಸಿದ್ದಾರೆ.
ತಕ್ಷಣವೇ ಅವರು ಅಮ್ಮನಹಳ್ಳಿ ಗ್ರಾಮಕ್ಕೆ ಆಗಮಿಸಿ ಹುಡುಕಾಟ ನಡೆಸಿದ್ದಾರೆ. ಕೆಲ ಹೊತ್ತಿನ ಬಳಿಕ ಗ್ರಾಮದ ಕೆರೆಯಲ್ಲಿ ಮಧುಶ್ರೀ ಅವರು ಶವವಾಗಿ ಪತ್ತೆಯಾಗಿದ್ದಾರೆ.
ಇನ್ನೂ ಈ ದಂಪತಿಗೆ 2 ವರ್ಷದ ಗಂಡು ಮಗು ಕೂಡ ಇದ್ದೂ, ಆ ಮಗು ಕೂಡ ನಾಪತ್ತೆಯಾಗಿದೆ. ನಮಗೆ ಇಲ್ಲಿ ಏನಾಗುತ್ತಿದೆ ಎನ್ನುವುದು ತಿಳಿಯುತ್ತಿಲ್ಲ ಎಂದು ಮೃತ ಮಧುಶ್ರೀ ಪೋಷಕರು ದೂರಿದ್ದಾರೆ.
ಇನ್ನೂ ಮೃತರ ತಂದೆ ತಾಯಿ ಯೋಗೀಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಆತನ ವಿರುದ್ಧ ದೂರು ದಾಖಲಿಸಿ ಕೊಲೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


