nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    ತುಮಕೂರು August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    By Ganesh TumkuruAugust 2, 2026No Comments2 Mins Read
    swachata karya.jpg

    ತುಮಕೂರು: ನಗರದ 30ನೇ ವಾರ್ಡಿನ ಸಪ್ತಗಿರಿ ಬಡಾವಣೆಯ ಗಾರೇನರಸಯ್ಯ ನಕಟ್ಟೆಯಲ್ಲಿ ಮಹಾನಗರಪಾಲಿಕೆ ಮತ್ತು ಬಡಾವಣೆಯ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಶುಕ್ರವಾರ ಬೆಳಿಗ್ಗೆ ಸ್ವಚ್ಛತಾ ಕಾರ್ಯ ಹಮ್ಮಿ ಕೊಳ್ಳಲಾಗಿತ್ತು.

    ಕೆರೆಯ ಸುತ್ತಮುತ್ತ ಬೆಳೆದಿದ್ದ ಗಿಡಗಂಟೆಗಳು, ಕಾಲುವೆಯ ಮೂಲಕ ಕೆರೆ ಅಂಗಳಕ್ಕೆ ಸೇರಿದ್ದ ಪ್ಲಾಸ್ಟಿಕ್, ಬಟ್ಟೆ ಹಾಗೂ ಇತರೆ ತ್ಯಾಜ್ಯಗಳನ್ನು ಪಾಲಿಕೆಯ ಆರೋಗ್ಯ ನಿರೀಕ್ಷಕರ ನೇತೃತ್ವದಲ್ಲಿ ಪೌರ ಕಾರ್ಮಿಕರು ಹಾಗೂ ನಾಗರಿಕರು ಜೊತೆಗೂಡಿ ತೆರವು ಕಾರ್ಯ ಮಾಡಿದರು. ಈ ವೇಳೆ ಮಾತನಾಡಿದ ಪಾಲಿಕೆ ಮಾಜಿ ಸದಸ್ಯ ವಿಷ್ಣುವರ್ಧನ್ ಅವರು ಗಾರೇನರಸಯ್ಯನ ಕಟ್ಟೆ ಸ್ವಚ್ಛತಾ ಕಾರ್ಯ ಶುಕ್ರವಾರ ಮಹಾನಗರಪಾಲಿಕೆ ಹಾಗೂ ಬಡಾವಣೆ ನಾಗರಿಕರ ಸಮಿತಿ ಸಹಯೋಗದಲ್ಲಿ ಯಶಸ್ವಿಯಾಗಿ ನೆರವೇರಿದ್ದು, ಈ ಕಾರ್ಯಕ್ಕೆ ಸಹಕರಿಸಿದ ಪಾಲಿಕೆ ಹಾಗೂ ನಾಗರಿಕರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.

    ಪಾಲಿಕೆಯಲ್ಲಿ ಸಿಬ್ಬಂದಿ ಕೊರತೆಯಿರುವುದರಿಂದ ನಾಗರಿಕರು ನಗರದ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಬೇಕು. ಇದರಿಂದ ನಮ್ಮ ಬೀದಿ ಕೆರೆಕಟ್ಟೆ, ಸುತ್ತಮುತ್ತಲಿನ ಪ್ರದೇಶ ಸ್ವಚ್ಛತೆಯಿಂದ ಇರಲು ಸಾಧ್ಯವಾಗುತ್ತದೆ ಎಂದರು. ನಾಗರಿಕ ಸಮಿತಿ ಅಧ್ಯಕ್ಷ ರಮೇಶ್ ಕುಮಾರ್ ಸಿಂಧೆ ಮಾತನಾಡಿ ಗಾರೇನರಸಯ್ಯನ ಕಟ್ಟೆ ಈ ಭಾಗದ ಜನರಿಗೆ ಶುದ್ಧಗಾಳಿ ತಂಪಾದ ವಾತಾವರಣ ಒದಗಿಸುತ್ತಿದ್ದು ಇದನ್ನು ಸಂರಕ್ಷಿಸಬೇಕಾದ ಹೊಣೆಗಾರಿಕೆ ಪಾಲಿಕೆಯಷ್ಟೇ ನಾಗರಿಕರ ಮೇಲಿದೆ. ಇಂದು ಸ್ವಚ್ಛತಾ ಕಾರ್ಯಕ್ಕೆ ಪರಿಸರ ಕಾಳಜಿಯ ನಾಗರಿಕರೆಲ್ಲರೂ ಆಗಮಿಸಿ ಪಾಲಿಕೆಯೊಂದಿಗೆ ಕೈ ಜೋಡಿಸಿದ್ದು ಶ್ಲಾಘನೀಯವೆಂದರು.

    ಸಮಿತಿ ಪ್ರಧಾನ ಕಾರ್ಯದರ್ಶಿ ದೇವರಾಜು ಮಾತನಾಡಿ, ನಾಗರಿಕರಲ್ಲಿ ಪರಿಸರ ಪ್ರಜ್ಞೆ ಮೂಡುವುದು ಅವಶ್ಯಕವಾಗಿದೆ. ಎಲ್ಲೆಂದರಲ್ಲಿ ಕಸ ಸುರಿಯದೆ ಪಾಲಿಕೆ ಕಸ ಸಂಗ್ರಹ ವಾಹನಕ್ಕೆ ಹಾಕಿ ಸಹಕರಿಸಬೇಕು. ಪ್ರತಿ 2 ತಿಂಗಳಿಗೊಮ್ಮೆ ಸಮಿತಿಯಿಂದ ಸ್ವಚ್ಛತಾ ಕಾರ್ಯ ಹಮ್ಮಿ ಕೊಂಡಿದ್ದು, ಇದರಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.

    ಪಾಲಿಕೆಯ ಆರೋಗ್ಯ ನಿರೀಕ್ಷಕಿ ಪದ್ಮಪ್ರಿಯಾ ಮಾತನಾಡಿ, ಪಾಲಿಕೆಯ ಸ್ವಚ್ಛತಾ ಅಭಿಯಾನಕ್ಕೆ ತುಮಕೂರಿನ ಸಪ್ತಗಿರಿ ಬಡಾವಣೆ (ದಕ್ಷಿಣ) ಭಾಗದ ನಾಗರಿಕ ಹಿತರಕ್ಷಣಾ ಸಮಿತಿಯವರು ಕೈ ಜೋಡಿಸಿದ್ದು ಸ್ವಾಗತಾರ್ಹ. ನಮ್ಮ ಪರಿಸರವನ್ನು ನಾವೇ ಸ್ವಚ್ಛವಾಗಿಟ್ಟುಕೊಳ್ಳಲು ಎಲ್ಲರೂ ಮುಂದಾಗಬೇಕೆಂದರು.

    ನಾಗರಿಕ ಹಿತರಕ್ಷಣಾ ಸಮಿತಿಯ ಮಾಜಿ ಅಧ್ಯಕ್ಷ ರಾಮಣ್ಣ, ಉಪಾಧ್ಯಕ್ಷತ್ಯಾಗರಾಜ್, ನಿರ್ದೇಶಕರಾದ ಅಮರನಾಥ್ಶೆಟ್ಟಿ, ಪ್ರಕಾಶ್, ಕುಮಾರ್ ಸೇರಿದಂತೆ ಪಾಲಿಕೆ ದಫ್ಫೇದಾರ್ ಎಸ್. ನಟರಾಜ್ ಹಾಗೂ ಸಿಬ್ಬಂದಿ ವರ್ಗದವರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    Ganesh Tumkuru
    • Website

    Related Posts

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ಸರಗೂರು: ಸ್ತನ್ಯಪಾನದಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ತಾಯಿ ಮತ್ತು ಮಗುವಿನ ಆರೋಗ್ಯ ಸುಧಾರಣೆಗೆ ಇದು ಅತ್ಯಂತ ಅಗತ್ಯವಾಗಿದೆ.…

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.