ಬೆಂಗಳೂರು: ಬೊಮ್ಮನಹಳ್ಳಿ ಸಮೀಪದ ಗಾರ್ವೇಬಾವಿ ಪಾಳ್ಯದ ಲಕ್ಷ್ಮೀ ಲೇಔಟ್ ನ ಏಳನೇ ಕ್ರಾಸ್ ನ ಮನೆಯೊಂದರಲ್ಲಿ ಸಿಲಿಂಡರ್ ಗ್ಯಾಸ್ ಲಿಕೇಜ್ ನಿಂದಾಗಿ ಸ್ಫೋಟಗೊಂಡಿದೆ. ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ.
ಸುಬ್ರಮಣಿ ಎಂಬುವವರಿಗೆ ಸೇರಿದ ಬಿಲ್ಡಿಂಗ್ ನಲ್ಲಿ ನೇಪಾಳ ಮೂಲದ ಸಂದೇಶ್ ಕುಟುಂಬ ವಾಸವಿದ್ದರು. ರಾತ್ರಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿದೆ. ಆದರೆ ಇದನ್ನು ಗಮನಿಸದೆ ಬೆಳಗ್ಗೆ ಎಂದಿನಂತೆ ಅಡುಗೆ ಮನೆಯ ಲೈಟ್ ಆನ್ ಮಾಡುತ್ತಿದ್ದಂತೆ ಸ್ಫೋಟಗೊಂಡಿದೆ.

