ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಅಯ್ಯಪ್ಪ ಸ್ವಾಮಿ ಭಕ್ತರ ಪೈಕಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ9 ಮಂದಿಯ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18) ಮೃತಪಟ್ಟಿದ್ದಾರೆ. ಉಳಿದ 7 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.
ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಅಯ್ಯಪ್ಪ ಮಾಲಾಧಾರಿಗಳು ದೇಗುಲದಲ್ಲಿ ರಾತ್ರಿ ಮಲಗಿದ್ದಾಗ ಗ್ಯಾಸ್ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx