ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
6ನೇ ಆರೋಪಿ ಬೆಳಗಾವಿಯ ಭರತ್ ಜಯವಂತ್ ಕುರಾನೆ, 9ನೇ ಆರೋಪಿ ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಾಲೇಕರ್, 13ನೇ ಆರೋಪಿ ಶಿವಮೊಗ್ಗದ ಶಿಕಾರಿಪುರದ ಸುಜಿತ್ ಕುಮಾರ್,16ನೇ ಆರೋಪಿ ಮಹಾರಾಷ್ಟ್ರದ ಔರಂಗಾಬಾದ್ ಶ್ರೀ ಕಾಂತ್ ಪಂಗಾರ್ಕರ್ ಗೆ ಜಾಮೀನು ಮಂಜೂರಾಗಿದೆ.
ಈ ಹಿಂದೆ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿತ್ತು. ಇದರೊಂದಿಗೆ 18 ಆರೋಪಿಗಳ ಪೈಕಿ 8 ಮಂದಿಗೆ ನ್ಯಾಯಾಲಯವು ಜಾಮೀನು ನೀಡಿದಂತಾಗಿದೆ.
ಎಲ್ಲ ಆರೋಪಿಗಳು ತಲಾ 1 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು. ಅರ್ಜಿದಾರರು ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ಅನುಮತಿಸದ ಹೊರತು ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ಈ ಪೈಕಿ ಯಾವುದೇ ಷರತ್ತು ಉಲ್ಲಂಘಿಸಿದರೂ ಪ್ರಾಸಿಕ್ಯೂಷನ್ ಜಾಮೀನು ರದ್ದತಿಗೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q