ಬೀದರ್/ಔರಾದ್: ಔರಾದ್ (ಬಿ) ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಕಾರ್ಯದರ್ಶಿಯಾಗಿ ಕೌಡಗಾಂವ ಗ್ರಾಮದ ಗೌತಮ್ ತಂದೆ ಪುಂಡಲೀಕ ಮೇತ್ರೆ ಅವರನ್ನು ನೇಮಕ ಮಾಡಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ, ಔರಾದ್ ಕ್ಷೇತ್ರದ ಕಾಂಗ್ರೆಸ್ ಮುಖಂಡ ಭೀಮಸೇನರಾವ್ ಶಿಂಧೆ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ (BUDA) ಅಧ್ಯಕ್ಷ ವಿನೋದಕುಮಾರ ಅಪ್ಪೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನಾ ಅವರ ಒಪ್ಪಿಗೆಯ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.
ಬೀದರ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ) ಅಧ್ಯಕ್ಷ ಸಂಜೀವಕುಮಾರ ಡಿ. ಕುರನಳ್ಳಿಕರ್ ಹಾಗೂ ಔರಾದ್ ಬ್ಲಾಕ್ ಕಾಂಗ್ರೆಸ್ (ಪ.ಜಾ) ಅಧ್ಯಕ್ಷ ಸ್ವಾಮಿದಾಸ್ ಉಜಿನಿಕರ್ ಅವರ ಅನುಮೋದನೆಯೊಂದಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ.
ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮತ್ತು ನೀತಿ–ನಿಯಮಗಳಿಗೆ ಒಳಪಟ್ಟು, ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಪರಿಶಿಷ್ಟ ಜಾತಿ ಸಮುದಾಯದ ಜನರ ಸಮಸ್ಯೆಗಳಿಗೆ ಸಕ್ರಿಯವಾಗಿ ಸ್ಪಂದಿಸುವ ಜವಾಬ್ದಾರಿಯನ್ನು ಗೌತಮ್ ಮೇತ್ರೆ ಅವರಿಗೆ ವಹಿಸಲಾಗಿದೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
