ತಿಪಟೂರು: ನಗರದ ಸೀತಾರಾಮಯ್ಯ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾವಗೀತಾ ಮತ್ತು ಅಭಿನಂದನ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಉದ್ಘಾಟಿಸಿದರು
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಬಯಲುಸೀಮೆ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ವತಿಯಿಂದ ಪ್ರತಿವರ್ಷ ಒಂದಲ್ಲಾ ಒಂದು ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಹಲವಾರು ತಾಲೂಕಿನ ಸಾಧಕರನ್ನು ಮತ್ತು ಪ್ರತಿಭೆಗಳ ಗುರುತಿಸಿ ಅವರಿಗೆ ಸನ್ಮಾನ ಸಮಾರಂಭ ಮಾಡುತ್ತಾ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮ ಜಿಲ್ಲೆ ಮತ್ತು ತಾಲೂಕುಗಳಿಗೆ ಕೋಡಿಗಳನ್ನು ಕೊಟ್ಟಂತಹ ದೊಡ್ಡ ಪ್ರತಿಭೆಗಳು ಇದ್ದಾರೆ. ಗಾಯನದ ಮೂಲಕ ಎಲ್ಲರನ್ನು ರಂಜಿಸುತ್ತಿರುವ ಗಾಯಕರಿಗೆ ಅಭಿನಂದನೆ ಸಲ್ಲಿಸಿದ ನಾಗೇಶ್, ಹಲವಾರು ಪ್ರತಿಭೆಗಳನ್ನು ಸೃಷ್ಟಿಸುತ್ತಾ, ತಾಲೂಕಿನ ಸಾಧಕರಿರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವ ಬಯಲುಸೀಮೆ ಸಾಮಾಜಿಕ ಸಂಘದ ಎಲ್ಲಾ ಮುಖ್ಯಸ್ಥರಿಗೆ ಇದೇ ವೇಳೆ ಅವರು ಧನ್ಯವಾದಗಳನ್ನು ಅರ್ಪಿಸಿದರು.
ಈ ಕಾರ್ಯಕ್ರಮದಲ್ಲಿ ಮಕ್ಕಳಿಂದ ಭಾವಗೀತೆಗಳ ಗಾಯನ ನಡೆಯಿತು.. ಈ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ದುಂಡುರಾಜ್, ಸಂಘದ ಅಧ್ಯಕ್ಷರು ಪ್ರಶಾಂತ್ ಸೇರಿದಂತೆ ಪ್ರಮುಖ ಕಲಾವಿದರು ಭಾಗಿಯಾಗಿದ್ದರು.
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700