ಮಂಡ್ಯ: ನಗರದ ಅಶೋಕ ನಗರದಲ್ಲಿರುವ ನ್ಯಾಷನಲ್ ಚಿಲ್ಡ್ರನ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆ ರಾಜ್ಯ ಘಟಕ ಶ್ರೀ ಶಂಭು ಸೇವಾ ಟ್ರಸ್ಟ್ ಎಂ.ಬೊಮ್ಮನಹಳ್ಳಿ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮನ್ಮುಲು ಅಧ್ಯಕ್ಷ ರಾಮಚಂದ್ರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನ್ಯಾಷನಲ್ ಚಿಲ್ಡ್ರನ್ಸ್ ಶಾಲೆ ಕಾರ್ಯದರ್ಶಿ, ಬಿ.ಟಿ.ನಾಗರಾಜು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆ ರಾಜ್ಯಾಧ್ಯಕ್ಷ ಪೋತೇರ ಮಹದೇವು, ಸಮಾಜ ಸೇವಕ ಶಿವಪ್ರಸಾದ್ ಗುರು, ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ಶಿಕ್ಷಕರಾದ ಬಾಲಚಂದ್ರ ಹೆಗಡೆ, ರಾಮಚಂದ್ರ, ಗೀತಾ ಲೋಕೇಶ್, ಎಂ. ನೀಲಮ್ಮ, ಮಂಜುಳಾ, ವಿವಿಧ ಕ್ಷೇತ್ರಗಳ ಪ್ರಶಸ್ತಿ ಪುರಸ್ಕೃತರಾಗಿರುವ ಜೆ.ಜಗದೀಶ್ ಕಿಲಾರ ಕೃಷ್ಣ, ಮಂಗಳ, ಯೋಗೇಶ್ ಎಂ., ಗುರುಪ್ರಸಾದ್, ಸುಧಾ ಆರಾಧ್ಯ ಸೇರಿದಂತೆ ಕಸ್ತೂರಿ ಸಿರಿಗನ್ನಡ ವೇದಿಕೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ವರದಿ: ಸುಶ್ಮಿತಾ ಶೇಖರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy