ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ, ಹೀಗಾಗಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಎನ್‌ಜಿ ಚಿಲುಮೆಗೆ 20-08-2022ರಲ್ಲಿ ಬಿಬಿಎಂಪಿ ಮತದಾರರ ಪಟ್ಟಿ ಪರಿಷ್ಕರಣೆ ಆದೇಶ ನೀಡಿದ್ದರು. ಇದೊಂದು ಸಿಎಂ ಮತ್ತು ಬಿಬಿಎಂಪಿ ಎಲೆಕ್ಷನ್ ಕಮಿಷನರ್ ಸೇರಿ ಮಾಡಿದ ಸಂಚು ಅನಿಸುತ್ತದೆ. ಜಾಹೀರಾತು ನೀಡದೆ ಖಾಸಗಿ ಕಂಪನಿಗೆ ಮತದಾರರ ಪಟ್ಟಿ ಸಂಸ್ಕರಣೆ ಮಾಡಿ ಡಿಲಿಷನ್ ಅಡಿಷನ್ ಮಾಡ್ತಾರೆ. ಚಿಲುಮೆ ಸಂಸ್ಥೆಯವರಿಗೆ ಅನುಭವವೂ ಇಲ್ಲ. ಬೂತ್ ಲೆವೆಲ್ ಆಫೀಸರ್ ಅಂತ ಅವರಿಗೆ ಐಡಿ ಕಾರ್ಡ್ ನೀಡಿದ್ದಾರೆ. ಪೀಪಲ್ಸ್ ರೆಪ್ರೆಸೆಂಟೇಷನ್ ಆ್ಯಕ್ಟ್ ಪ್ರಕಾರ ಸರ್ಕಾರಿ ನೌಕರರು ಅಲ್ಲದಿರುವವರು ಯಾರೂ ಬಿಎಲ್ಓ ಆಗುವುದಕ್ಕೆ ಸಾಧ್ಯವಿಲ್ಲ. ಈ ಕೃಷ್ಣಪ್ಪ ರವಿಕುಮಾರ್ ಅಕ್ರಮವಾಗಿ ಐಡಿ ಕಾರ್ಡ್ ಕೊಟ್ಟು ನೇಮಕ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಭ್ರಷ್ಟಾಚಾರ ಕೇವಲ ಗುತ್ತಿಗೆದಾರರ ವಿಷಯದಲ್ಲಿ ಮಾತ್ರ ನಡೆಯುತ್ತಿಲ್ಲ. ಚುನಾವಣೆಯನ್ನು ವಾಮ ಮಾರ್ಗದಲ್ಲಿ ಗೆಲ್ಲಬೇಕು ಅಂತ ಬೊಮ್ಮಾಯಿ ಏನೆಲ್ಲ ಆಟ ಆಡೋದಕ್ಕೆ ಶುರು ಮಾಡಿದ್ದಾರೆ ನೋಡಿ. ಓಟರ್ ಐಡಿ ತಿದ್ದುಪಡಿ ಮಾಡಿರುವುದು ಅಕ್ಷಮ್ಯ ಅಪರಾಧ. ಬೊಮ್ಮಾಯಿ ಸಿಎಂ ಆಗಿ ಹೇಗೆ ಮುಂದುವರಿತಾರೆ? ತಕ್ಷಣ ಅವರು ರಾಜೀನಾಮೆ ನೀಡಬೇಕು. ಬೊಮ್ಮಾಯಿಯನ್ನು ಅರೆಸ್ಟ್ ಮಾಡಬೇಕು. ಎಫ್ಐಆರ್ ದಾಖಲಾಗದಿದ್ದರೆ ಮುಂದಿನ ಕ್ರಮ ನಾವು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy