ಗುಬ್ಬಿ: ತಾಲೂಕಿನ ಸಿ.ಎಸ್.ಪುರ ಹೋಬಳಿಗೆ ಕೆಂಚನಹಳ್ಳಿ ಗ್ರಾಮದಲ್ಲಿ ಸಿ.ಎಸ್.ಪುರ ಗ್ರಾಮ ಪಂಚಾಯಿತಿ ವತಿಯಿಂದ ಘನ ತ್ಯಾಜ್ಯ ವಿಲೇವಾರಿ ಘಟಕ ಮಾಡಲು ಮುಂದಾಗಿರುವುದನ್ನು ಕೆಂಚನಹಳ್ಳಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಕೆಂಚನಹಳ್ಳಿ ಗ್ರಾಮದ ಸ.ನಂ.80.ಮತ್ತು 81 ರಲ್ಲಿ ಸರ್ಕಾರಿ ಜಾಗವಿದ್ದು, ಈ ಜಾಗದಲ್ಲಿ ಕಳೆದ 40 ವರ್ಷಗಳಿಂದ ಹಲವು ಕುಟುಂಬದವರು ಜಮೀನು ಉಳುಮೆ ಮಾಡಿಕೊಂಡಿದ್ದು, ಅನುಭವದಾರರು ಜಮೀನು ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದರು ಸಹ ಯಾವುದಕ್ಕೂ ಮನ್ನಣೆ ನೀಡದೆ ಏಕಏಕಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಆಡಳಿತ ವರ್ಗ ಉಳುಮೆ ಮಾಡುತ್ತಿರುವ ರೈತ ಕುಟುಂಬಕ್ಕೆ ಯಾವುದೇ ನೋಟಿಸ್ ನೀಡದೆ, ಜಾಗ ತೆರವು ಮಾಡುವಂತೆ ರೈತರಿಗೆ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಕರೆದುಕೊಂಡು ಬಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳ ನಡೆ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ ಆಡಳಿತ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಪಂಚಾಯತ್ ವ್ಯಾಪ್ತಿಯಲ್ಲಿ ಬೇರೆಡೆ ಸಾಕಷ್ಟು ಜಾಗವಿದ್ದು, ಉದ್ದೇಶ ಪೂರ್ವಕವಾಗಿ ಈ ಜಾಗದಲ್ಲಿ ಘಟಕ ನಿರ್ಮಾಣಕ್ಕೆ ಮುಂದಾಗಿರುವುದು ಸರಿಯಲ್ಲ ದಯವಿಟ್ಟು ಸಂಬಂಧ ಪಟ್ಟ ಜಿಲ್ಲಾ ಧಿಕಾರಿಯವರು. ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಕ್ತ ಕ್ರಮವಹಿಸುವ ಮೂಲಕ ರೈತರ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ವರದಿ: ಡಿ.ಮಂಜುನಾಥ್, ಗುಬ್ಬಿ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700