ವಿಜಾಪುರ ಜಿಲ್ಲೆ : ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರವ್ವ ಮೂರಮನ, ನೈರ್ಮಲ್ಯ ಮುಕ್ತ ಗ್ರಾಮ ಪಂಚಾಯತಿಯನ್ನಾಗಿ ಮಾಡುವ ಪರಿಕಲ್ಪನೆಯಲ್ಲಿ ಸುಮಾರು 12 ಲಕ್ಷ ರೂಪಾಯಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಮಸಬಿನಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅಪ್ಪಾಸಾಬ ಮಡಗೊಂಡ ಮಾಡುವ ಗ್ರಾಮ ಪಂಚಾಯತಿ ಸದಸ್ಯರಾದ ಶಿವಯ್ಯ ಹಿರೇಮಠ, ಬಸಲಿಂಗಯ್ಯ ಕೂಡಿಗೆಮಠ, ಶಂಕರ್ ಹಾರಿವಾಳ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಜಿ ಬೀ ಕಲ್ಯಾಣಿ, ಭೀಮ್ ಭೈರವಾಡಗಿ, ಉಪಸ್ಥಿತರಿದ್ದರು
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB