nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 5 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮ
    ರಾಜ್ಯ ಸುದ್ದಿ December 13, 2024

    ಜನವರಿ 5 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮ

    By adminDecember 13, 2024No Comments2 Mins Read
    doddaballapur

    ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರದ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ 5ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ನಡೆಯಲಿರುವ ಬ್ರಹ್ಮರಥೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    Provided by
    Provided by

    ಜನವರಿ 5ರಂದು ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ ಬ್ರಹ್ಮರಥೋತ್ಸವ ನಡೆಯಲಿದೆ. ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

    ಡಿ.20 ರಿಂದ 30 ವರೆಗೆ ದನಗಳ ಜಾತ್ರೆ:

    ಘಾಟಿ ದನಗಳ ಜಾತ್ರೆಗೆ ವಿವಿಧ ಭಾಗಗಳಿಂದ ಸಾಕಷ್ಟು ಜಾನುವಾರುಗಳು ಆಗಮಿಸಲಿದ್ದು ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ದನಗಳ ಕಟ್ಟಿಹಾಕುವ ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

    ಬ್ರಹ್ಮ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ, ಪಾರ್ಕಿಂಗ್ ಸ್ಥಳಕ್ಕೆ ತೆರಳಲು ಸೂಚನಾ ಫಲಕ ಅಳವಡಿಸುವ ಮೂಲಕ ವಾಹನ ದಟ್ಟಣೆ ಆಗದಂತೆ ಕ್ರಮ ವಹಿಸಿ ಎಂದರಲ್ಲದೆ, ಬ್ರಹ್ಮ ರಥೋತ್ಸವ ದಿನ ಹೆಚ್ಚುವರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಿ. ಸಾರ್ವಜನಿಕರು ಪಾರ್ಕಿಂಗ್ ಸ್ಥಳದಿಂದ ದೇವಾಲಯಕ್ಕೆ ತೆರಳಲು ಹಾಗೂ ಮರಳಲು ಉಚಿತ ವಾಹನ ವ್ಯವಸ್ಥೆ ಮಾಡಿ ಎಂದರು.

    ಸಾರ್ವಜನಿಕರಿಗೆ ಉಚಿತ ಊಟದ ವ್ಯವಸ್ಥೆ, ಕುಡಿಯುವ ನೀರನ್ನು ವ್ಯವಸ್ಥಿತವಾಗಿ ಪೂರೈಸಿ ಹಾಗೂ ಹೆಚ್ಚುವರಿಯಾಗಿ ತಾತ್ಕಾಲಿಕ ಶೌಚಾಲಯಗಳನ್ನು ಒದಗಿಸಿ ಎಂದು ಘಾಟಿ ದೇವಾಲಯದ ಅಧಿಕಾರಿಗಳಿಗೆ ಸೂಚಿಸಿದರು.

    ಪ್ಲಾಸ್ಟಿಕ್ ಬಳಕೆ ನಿಷೇಧ:

    ಜಾತ್ರಾ ಮಹೋತ್ಸವದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ದೇವಾಲಯ ಆವರಣದಲ್ಲಿರುವ ಅಂಗಡಿ ಮಳಿಗೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿ ಸಾರ್ವಜನಿಕರು ಕೂಡ ಪ್ಲಾಸ್ಟಿಕ್ ಬಳಸದಂತೆ ಜಿಲ್ಲಾಧಿಕಾರಿಯವರು ಮನವಿ ಮಾಡಿದರು.

    ದೇವಾಲಯದ ಸುತ್ತಮುತ್ತಲೂ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕಾಗಿ ನಗರಸಭೆಯಿಂದ ಪೌರಕಾರ್ಮಿಕರನ್ನು ನೇಮಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು. ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರ ಹಾಗೂ ಅಂಬುಲೆನ್ಸ್ ಸೇವೆ ಒದಗಿಸುವಂತೆ ಆರೊಗ್ಯಾಧಿಕಾರಿಗಳಿಗೆ ಸೂಚಿಸಿದರು. ಜಾತ್ರಾ ಮಹೋತ್ಸವದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಘಾಟಿ ಸುಬ್ರಮಣ್ಯ ದೇವಾಲಯದ ಆಡಳಿತಾಧಿಕಾರಿ ಅಮರೇಶ ಹೆಚ್, ಜಿ. ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಡಿವೈಎಸ್ಪಿ ರವಿ, ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ದಿನೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಭಾವಿದ್ಯಾ ರಾಥೋಡ್, ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ. ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ…

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.