ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ನೆಲ್ಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗ್ಗಾವೆ ಗ್ರಾಮದ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಗಿಡಗಂಟೆಗಳ ಮಧ್ಯೆ ಮುಚ್ಚಿ ಹೋದ ಸ್ಥಿತಿಯಲ್ಲಿದ್ದ ಬಗ್ಗೆ ‘ನಮ್ಮ ತುಮಕೂರು.ಕಾಂ’ ವರದಿ ಪ್ರಕಟಿಸಿತ್ತು. ವರದಿ ಪ್ರಕಟಿಸಿ ಕೇವಲ ಎರಡೇ ದಿನದಲ್ಲಿ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತ್ ಅಧಿಕಾರಿಗಳು ಗಿಡಗಂಟಿಗಳಿಂದ ಅಂಬೇಡ್ಕರ್ ಭವನಕ್ಕೆ ಮುಕ್ತಿ ನೀಡಿದ್ದಾರೆ.
“ಗಿಡಗಂಟಿಗಳ ಮಧ್ಯೆ ‘ಕಾಣದಂತೆ ಮಾಯವಾದ ಅಂಬೇಡ್ಕರ್ ಭವನ’” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ ಇಲ್ಲಿನ ಅಂಬೇಡ್ಕರ್ ಭವನದ ದುಸ್ಥಿತಿಯನ್ನು ತೆರೆದಿಟ್ಟಿದ್ದು, ಈ ವರದಿ ಪ್ರಕಟಗೊಂಡ ತಕ್ಷಣವೇ ಎಚ್ಚೆತ್ತುಕೊಂಡ ಅಧಿಕಾರಿಗಳು ಜೆಸಿಬಿ ಮೂಲಕ ಗಿಡಗಂಟಿಗಳನ್ನು ತೆರವುಗೊಳಿಸಿ, ಸಾರ್ವಜನಿಕ ಉಪಯೋಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಾ.ಎನ್.ಮೂರ್ತಿ ಸ್ಥಾಪಿತ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಗ್ಗಾವೆ ಪುಟ್ಟಸ್ವಾಮಿ, ನ್ಯಾಯದ ಪರವಾಗಿ ಹೋರಾಟ ಮಾಡಿ, ಅಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದ ನಮ್ಮ ತುಮಕೂರು.ಕಾಂ ಮಾಧ್ಯಮಕ್ಕೆ ನಮ್ಮ ಸಮುದಾಯ ಹಾಗೂ ಸಂಘಟನೆ ಎಂದೆಂದಿಗೂ ಆಭಾರಿಯಾಗಿದ್ದೇವೆ ಎಂದು ಧನ್ಯವಾದಗಳನ್ನು ತಿಳಿಸಿದರು.
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZphalashruti
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700