ಗಾಜಿಯಾಬಾದ್: ಬಾಲಕಿಯನ್ನು ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.
ಆರೋಪಿಗಳ ಪೈಕಿ ಒಬ್ಬನಿಗೆ ಬಾಲಕಿಯ ಪರಿಚಯವಿತ್ತು. ಆಕೆ ಕರೆ ಮಾಡಿ ಕರೆಸಿ ಬಳಿಕ ಸ್ನೇಹಿತನ ಜೊತೆ ಸೇರಿ ಆಕೆಯನ್ನು ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಬಾಲಕಿಯ ದೂರಿನ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ರಫ್ ಹಾಗೂ ಮತ್ತೊಬ್ಬ ಯುವಕ ಬಂಧಿತ ಆರೋಪಿಗಳಾಗಿದ್ದಾರೆ.
ಮೋದಿ ನಗರದ ನಿವಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಡೆದ ಘಟನೆಯನ್ನು ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದು, ಅವರು ತಕ್ಷಣವೇ ನಿವಾರಿ ಪೊಲೀಸ್ ಠಾಣೆಗೆ ಕರೆತಂದು ಎಫ್ಐಆರ್ ದಾಖಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4