ಬೆಳಗಾವಿ: ಏಳನೇ ತರಗತಿಯ ವಿದ್ಯಾರ್ಥಿನಿಯನ್ನು ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ.
ನವೆಂಬರ್.23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಕೃತ್ಯ ಬೆಳಕಿಗೆ ಬರುವುದು ತಡವಾಗಿದೆ.
ಏತನ್ಮಧ್ಯೆ ವಿಚಾರ ತಿಳಿದ ಪೋಷಕರು ಡಿಸೆಂಬರ್ 1ರಂದು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣ ಸಂಬಂಧ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


