ಹಿಮಾಚಲ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ 9ನೇ ತರಗತಿಯ ವಿದ್ಯಾರ್ಥಿನಿಗೆ ಅಶ್ಲೀಲ ವೀಡಿಯೋ ತೋರಿಸಿ ಆಕೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಜುಂಗಾ ಎಂಬಲ್ಲಿ ಈ ಕೃತ್ಯ ನಡೆದಿದೆ. ಸರ್ಕಾರಿ ಪ್ರೌಢಶಾಲೆಯ ಡ್ರಾಯಿಂಗ್ ಶಿಕ್ಷಕ, ಮೇ 2 ರಂದು ಶಾಲೆಯಲ್ಲಿ ಬಲವಂತವಾಗಿ ವಿದ್ಯಾರ್ಥಿನಿಗೆ ಅಶ್ಲೀಲ ವೀಡಿಯೋ ತೋರಿಸಿದ್ದಾನೆ. ಅಲ್ಲದೇ ಅನುಚಿತವಾಗಿ ವಿದ್ಯಾರ್ಥಿನಿಯನ್ನು ಸ್ಪರ್ಶಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಮಾನಭಂಗಕ್ಕೆ ಯತ್ನ ಮತ್ತು ಲೈಂಗಿಕ ಅಪರಾಧಗಳಿಂದ, ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್ 10 ಮತ್ತು 12ರ ಅಡಿಯಲ್ಲಿ ಲೈಂಗಿಕ ಕಿರುಕುಳ ಮತ್ತು ಹಲ್ಲೆಯ ಯತ್ನದ ಪ್ರಕರಣ ದಾಖಲಾಗಿದೆ. ಆರೋಪಿಯ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


