ತುಮಕೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಜನನಿಬಿಡ ಪ್ರದೇಶದಲ್ಲಿ ಲಾಂಗ್ ಹಿಡಿದು ಅಂಗಡಿಯವೊಂದಕ್ಕೆ ನುಗ್ಗಿ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
ತುಮಕೂರು ನಗರದ ಮೇಳಕೋಟೆ ಮುಖ್ಯರಸ್ತೆಯಲ್ಲಿರುವ ಮುಬಾರಕ್ ಸಮೋಸ ಸೆಂಟರ್ ನಲ್ಲಿ ಗುಂಪೊಂದು ಯುವಕನ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿದೆ.
ತೀವ್ರ ವಾಗಿ ಹಲ್ಲೆ ಮಾಡಿರೋ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.
ಉಪ್ಪಾರಹಳ್ಳಿ ಮೂಲದ ಯುವತಿಯ ವಿಷಯಕ್ಕೆ ಸಂಬಂಧಿಸಿದಂತೆ ಸದಾಶಿವನಗರದ ಹುಸೆನ್ ಎಂಬ ಯುವಕ ಇಸ್ಮಾಯಿಲ್ ನಗರದ ಆಯುಬ್ ಎಂಬ ಯುವಕನಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.
ಜನಿಬಿಡ ಪ್ರದೇಶದಲ್ಲಿ ಪುಂಡರ ಗುಂಪು ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಹಲ್ಲೆಗೊಳಗಾದ ಯುವಕನನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಪಾಯದಿಂದ ಯುವಕಪಾರಾಗಿದ್ದಾನೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q