ಬೆಂಗಳೂರು: ಶಾಪಿಂಗ್ ಕರೆದೊಯ್ಯಲಿಲ್ಲ ಎಂದು ನೊಂದು ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಬಾಲಕಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪೋಷಕರು ಆತ್ಮಹತ್ಯೆ ವಿಚಾರ ಪೊಲೀಸರಿಗೆ ಮಾಹಿತಿ ನೀಡದೆಯೇ ಅಂತ್ಯ ಸಂಸ್ಕಾರ ನಡೆಸಿದ ಘಟನೆ ನಡೆದಿದೆ.
ಮಾಗಡಿ ತಾಲೂಕಿನ ಸೋಲೂರಿನ ಬಸವನಹಳ್ಳಿ ನಿವಾಸಿ ಧೃತಿ ಜಿ. ಆತ್ಮಹತ್ಯೆಗೆ ಶರಣಾದ ಬಾಲಕಿಯಾಗಿದ್ದಾಳೆ. ಶನಿವಾರ ಸಂಜೆ 4 ರಿಂದ 5 ಗಂಟೆಯ ನಡುವೆ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ನೇಣು ಬಿಗುದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕೃಷಿಕರಾದ ಆಕೆಯ ತಂದೆ ಗಂಗಾಧರಯ್ಯ ಮತ್ತು ತಾಯಿ ಸಂಬಂಧಿಕರ ಮದುವೆಗೆಂದು ಶಾಪಿಂಗ್’ಗೆ ಹೋಗಿದ್ದರು. ದಂಪತಿಗೆ ದೃತಿ ಒಬ್ಬಳೇ ಮಗಳಿದ್ದು, ಈಕೆ ಪಿಯುಸಿ ಓದುತ್ತಿದ್ದಳು. ತನ್ನನ್ನು ಶಾಂಪಿಂಗ್’ಗೆ ಕರೆದುಕೊಂಡು ಹೋಗದ್ದಕ್ಕೆ ಬೇಸರಗೊಂಡಿದ್ದಳು. ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ಕಾಲೇಜಿನಿಂದ ಮನೆಗೆ ಬಂದಿರುವ ಆಕೆ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಶಾಪಿಂಗ್ ಮುಗಿಸಿ ಮನೆಗೆ ಬಂದ ವೇಳೆ ಬಾಲಕಿ ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಿಸಿದರೆ, ದೇಹವನ್ನು ತುಂಡಾಗಿಸುತ್ತಾರೆಂಬ ಭಯದಿಂದ ಪೊಲೀಸರಿಗೆ ಮಾಹಿತಿ ನೀಡಲಿಲ್ಲ ಎಂದು ಪೋಷಕರು ಹೇಳಿದ್ದಾರೆ. ಆದರೆ ಇದೀಗ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಬಾಲಕಿಯ ಪೋಷಕರ ವಿರುದ್ಧ ಬಿಎನ್ ಎಸ್ ನ ಸೆಕ್ಷನ್ 211 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx