ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಅಸಮರ್ಪಕ ಬಸ್ ವ್ಯವಸ್ಥೆಯಿಂದಾಗಿ ಹೆಣ್ಣುಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಿರುವ ಘಟನೆ ನಡೆಯುತ್ತಿದೆ.
ಕೊರೆಕಲ್, ಬ್ಯಾಂಬರಿ, ಡೋಣಗಾಂವ(ಮಹಾ), ಬೇಡಕುಂದಾ, ಲಕ್ಷ್ಮಿನಗರ ಸೇರಿದಂತೆ ಇನ್ನೂ ಹಲವು ಗ್ರಾಮಗಳಿಂದ ಠಾಣಾಕುಶನೂರಿಗೆ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ–ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ಸೂಕ್ತ ಬಸ್ ವ್ಯವಸ್ಥೆಯಿಲ್ಲದೇ ನಡಿಗೆಯಿಂದಲೇ ಓಡಾಡಬೇಕಾಗಿದೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದು, ವಿದ್ಯಾರ್ಥಿನಿಯರು ಮಧ್ಯದಲ್ಲಿಯೇ ಶಿಕ್ಷಣದಿಂದ ದೂರ ಉಳಿಯುವಂತಾಗಿದೆ.
ಠಾಣಾಕುಶನೂರದಲ್ಲಿ ಸರ್ಕಾರಿ ಪಿಯುಸಿ ಕಾಲೇಜು, ಫ್ರೌಢಶಾಲೆ, ಸರ್ಕಾರಿ ಕನ್ಯಾ ಫ್ರೌಢಶಾಲೆ, ಪ್ರಾಥಮಿಕ ಕನ್ಯಾ ಶಾಲೆಗಳಿವೆ. ಜವಾಹರಲಾಲ್ ನೆಹರೂ ತಾಂತ್ರಿಕ ಮಹಾವಿದ್ಯಾಲಯ, ಅನುದಾನಿತ ಶಾಲೆಗಳಿವೆ. ಸುತ್ತಲಿನ ಗ್ರಾಮಗಳ ಮಕ್ಕಳು ಶಿಕ್ಷಣಕ್ಕಾಗಿ ಇಲ್ಲಿಗೆ ಬರುತ್ತಾರೆ. ಆದರೆ ಬಸ್ ಸೌಲಭ್ಯವಿಲ್ಲದೇ ನಿತ್ಯ 7–8 ಕಿ.ಮೀ. ದೂರವನ್ನು ನಡೆದುಕೊಂಡೇ ಕ್ರಮಿಸಬೇಕಾಗಿದೆ ಎಂದು ಲಕ್ಷ್ಮಿ ನಗರದ ನಿವಾಸಿಗಳು ಅಳಲು ತೊಂಡಿಕೊಂಡರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx