ಸರಗೂರು: ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಹೋಗಲಾಡಿಸಲು ಶಾಸಕ ಅನಿಲ್ ಚಿಕ್ಕಮಾದು ಶ್ರಮ ಪಡುತ್ತಿದ್ದಾರೆ. ಅದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಎಚ್.ಡಿ.ಕೋಟೆ ಮತ್ತು ಸರಗೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನವನ್ನು ನೀಡಿ ತಾಲೂಕನ್ನು ಅಭಿವೃದ್ಧಿಪಡಿಸಲು ಸಹಕರಿಸಿದಂತಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದ್ದಾರೆ.
ನಮ್ಮ ವಿಧಾನಸಭಾ ಕ್ಷೇತ್ರಕ್ಕೆ ದಿ.ಎಸ್.ಎಂ.ಕೃಷ್ಣರವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೋಟೆ ಎಂ.ಶಿವಣ್ಣ ವರಿಗೆ ಸಚಿವ ಸ್ಥಾನ ನೀಡಲಾಗಿತ್ತು.ಅಲ್ಲಿದ ಇಲ್ಲಿವರೆಗೂ ಯಾವುದೇ ಸ್ಥಾನ ಮಾನ ನೀಡಿಲ್ಲ. ಅನೀಲ್ ಚಿಕ್ಕಮಾದು ರವರು ಹಿಂದುಳಿದ ತಾಲ್ಲೂಕು ಹಣೆಪಟ್ಟಿಯನ್ನು ಹೋಗಲಾಡಿಸಿಕೊಂಡು ಹಂತ ಹಂತವಾಗಿ ಬರುತ್ತಿದ್ದಾರೆ. ಅವರಿಗೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರವರು ಸಹಕಾರ ನೀಡುತ್ತಾ ಬರುತ್ತಿರುವುದರಿಂದ ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ. ಅವುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಸಚಿವ ಸ್ಥಾನ ನೀಡಿ. ಶಾಸಕರ ರಾಜಕೀಯ ಗುರುಗಳಾದ ದಿ ಲೋಕಸಭಾ ಸದಸ್ಯ ದಿ ಆರ್.ಧ್ರುವನಾರಾಯಣ್ ಕ್ಷೇತ್ರಕ್ಕೆ ಅಭಿವೃದ್ಧಿಗೊಳಿಸಲು ಬುನಾದಿ ಹಾಕಿಕೊಟ್ಟ ಅದೇ ದಾರಿಯಲ್ಲಿ ಹೋಗುತ್ತಿದ್ದಾರೆ. ಎರಡು ತಾಲೂಕಿನ ಎಲ್ಲಾ ಸಮುದಾಯದಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಡೆಗೆ ಹೋಗುತ್ತಿದ್ದಾರೆ ಎಂದರು.
ಅನಿಲ್ ಚಿಕ್ಕಮಾದುರವರು ಎರಡನೇ ಬಾರಿಗೆ ಬಹುಮತ ಪಡೆದು ಶಾಸಕರಾಗಿದ್ದಾರೆ. ಆದ್ದರಿಂದ ಪಕ್ಷದ ಹಾಗೂ ತಾಲೂಕಿನ ಅಭಿವೃದ್ಧಿಯ ದೃಷ್ಟಿಯಿಂದ ಅನಿಲ್ ಚಿಕ್ಕಮಾದು ಅವರನು ಮಂತ್ರಿಯನ್ನಾಗಿ ಮಾಡಬೇಕೆಂದು ಎಂದು ಪತ್ರಿಕೆ ಪ್ರಕಟಣೆ ಮೂಲಕ ಮನವಿ ಮಾಡಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


