ಬೆಂಗಳೂರು: ಬಿಬಿಎಂಪಿ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಹತ್ತಿರ ಬರುತ್ತಲೇ ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಟಾರ್ಗೆಟ್ ಮಾಡಲು ಮುಂದಾಗಿದ್ದಾರೆ. ಬಿಜೆಪಿ ಅವಧಿಯಲ್ಲಿನ ಬಿಬಿಎಂಪಿ ಎಲ್ಲಾ ಟೆಂಡರ್, ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ.
2019 ರಿಂದ 2023 ರವರೆಗೆ ಬಿಬಿಎಂಪಿಯಲ್ಲಿ ನಡೆದ ಟೆಂಡರ್ ಗಳು, ಕಾಮಗಾರಿಗಳು, ಕಾಮಗಾರಿಗೆ ಬಿಡುಗಡೆಯಾದ ಅನುದಾನದ ಸಂಪೂರ್ಣ ಮಾಹಿತಿ ನೀಡುವಂತೆ ಬೆಂಗಳೂರು ಅಭಿವೃದ್ಧಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಪ್ರತಿ ಕಾಮಗಾರಿಯಲ್ಲಿ 15 ಅಂಶಗಳ ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ನೀಡುವಂತೆ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಹಾಗಾದರೆ ಚುನಾವಣೆ ಸಮಯದಲ್ಲಿ ಬಿಜೆಪಿಯನ್ನು ಕಟ್ಟಿ ಹಾಕುವ ತಂತ್ರನಾ? ಬಿಜೆಪಿ ಭ್ರಷ್ಟಾಚಾರ ಬಯಲಿಗೆ ಎಳೆಯುತ್ತಾರಾ? ಬಿಜೆಪಿ ಅವಧಿಯಲ್ಲಿ ಬಿಬಿಎಂಪಿಯಲ್ಲಿ ದೊಡ್ಡ ಅಕ್ರಮ ಆಗಿದೆಯಾ? ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ತನಿಖೆ ಮಾಡಿಸುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


